Mysore
25
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ನಿಮ್ಮ ಕೆಲಸ ಎಷ್ಟಿದೆ ಅದನ್ನು ನೋಡಿಕೊಳ್ಳಿ: ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ

kamal hasan

ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಹುಭಾಷಾ ನಟ ಕಮಲ್‌ ಹಾಸನ್‌ ಅವರು, ಸಾರ್ವಭೌಮ ರಾಷ್ಟ್ರಗಳ ನಡುವಿನ ಪರಸ್ಪರ ಗೌರವವು ಶಾಶ್ವತ ಜಾಗತಿಕ ಶಾಂತಿಯ ಏಕೈಕ ಅಡಿಪಾಯವಾಗಿದೆ. ನಿಮ್ಮ ದೇಶ ಅಲ್ಲಿನ ಜನರ ಶಾಂತಿ ಹಾಗೂ ಸಮೃದ್ಧಿಯನ್ನು ನಾವು ಬಯಸುತ್ತೇವೆ. ಭಾರತವು ಇತರ ದೇಶಗಳ ಆದೇಶವನ್ನು ಒಪ್ಪಿಕೊಳ್ಳುವುದಿಲ್ಲ. ದಯವಿಟ್ಟು ನಿಮ್ಮ ವ್ಯವಹಾರವನ್ನು ನೀವು ನೋಡಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

 

Tags:
error: Content is protected !!