Mysore
15
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ತಮಿಳುನಾಡು| ವೇದಿಕೆ ಮೇಲೆಯೇ ಕುಸಿದು ಬಿದ್ದ ತಮಿಳು ನಟ ವಿಶಾಲ್‌

ತಮಿಳುನಾಡು: ಖ್ಯಾತ ತಮಿಳು ನಟ ವಿಶಾಲ್‌ ಅವರು ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ವಿಶಾಲ್‌ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದ ಫೋಟೋಗಳು ಹಾಗೂ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿವೆ.

ಈ ವಿಡಿಯೋಗಳನ್ನು ನೋಡಿದ ಅಭಿಮಾನಿಗಳು ತೀವ್ರ ಆತಂಕಕ್ಕೊಳಗಾಗಿದ್ದು, ಈ ಮೊದಲು ವೇದಿಕೆ ಮೇಲೆ ಮಾತನಾಡುವಾಗ ಅವರು ಸಾಕಷ್ಟು ನಡುಗುತ್ತಿದ್ದರು. ಈ ಬೆನ್ನಲ್ಲೇ ವಿಶಾಲ್‌ ಈಗ ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಕೂವಾಗಮ್‌ನಲ್ಲಿರುವ ಕೂತಾಂಡವರ್‌ ದೇವಸ್ಥಾನದಲ್ಲಿ ಭಾನುವಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ವಿಶಾಲ್‌, ವೇದಿಕೆ ಮೇಲೆಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ಈ ವೇಳೆ ಅಲ್ಲೇ ಇದ್ದ ಮಾಜಿ ಸಚಿವ ಪೊನ್ನುಡಿ ಅವರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದು, ವಿಶಾಲ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!