ತಮಿಳುನಾಡು: ಖ್ಯಾತ ತಮಿಳು ನಟ ವಿಶಾಲ್ ಅವರು ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ವಿಶಾಲ್ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದ ಫೋಟೋಗಳು ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿವೆ.
ಈ ವಿಡಿಯೋಗಳನ್ನು ನೋಡಿದ ಅಭಿಮಾನಿಗಳು ತೀವ್ರ ಆತಂಕಕ್ಕೊಳಗಾಗಿದ್ದು, ಈ ಮೊದಲು ವೇದಿಕೆ ಮೇಲೆ ಮಾತನಾಡುವಾಗ ಅವರು ಸಾಕಷ್ಟು ನಡುಗುತ್ತಿದ್ದರು. ಈ ಬೆನ್ನಲ್ಲೇ ವಿಶಾಲ್ ಈಗ ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.
ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಕೂವಾಗಮ್‌ನಲ್ಲಿರುವ ಕೂತಾಂಡವರ್ ದೇವಸ್ಥಾನದಲ್ಲಿ ಭಾನುವಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ವಿಶಾಲ್, ವೇದಿಕೆ ಮೇಲೆಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಈ ವೇಳೆ ಅಲ್ಲೇ ಇದ್ದ ಮಾಜಿ ಸಚಿವ ಪೊನ್ನುಡಿ ಅವರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದು, ವಿಶಾಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…