ದೇಶ- ವಿದೇಶ

ಪತಿ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ತಮಿಳು ನಟಿ

ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ  ಅವರು ಹಲವು ಧಾರಾವಾಹಿಗಳಲ್ಲಿ ಪೋಷಕ ನಟಿಯಾಗಿ ಹಾಗೂ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. 2024ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಅವರನ್ನು ವಿವಾಹವಾಗಿ, ಅಲ್ಲಿಯೇ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಸಿನಿಮಾ ಚಿತ್ರೀಕರಣದ ಹಿನ್ನೆಲೆ ಚೆನ್ನೈನ ಪೋರೂರು ಬಳಿಯ ಅಯ್ಯಪ್ಪಂತಂಗಲ್‌ನಲ್ಲಿರುವ ಅಪಾರ್ಟ್ಮೆಂಟ್‌ವೊಂದನ್ನು ಬಾಡಿಗೆ ಪಡೆದಿದ್ದರು. ಮಾ.3ಕ್ಕೆ ಆ ಮನೆಗೆ ಬಂದಿದ್ದರು. ಏ.5ರ ರಾತ್ರಿ ತಮ್ಮ ಬಾಡಿಗೆ ಅಪಾರ್ಟ್ಮೆಂಟ್‌ನಲ್ಲಿ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ತಮ್ಮ ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿದ್ದು, ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಿಡಿಯೋ ಕಾಲ್‌ನಲ್ಲಿ ಇರುವಾಗಲೇ ನೇಣಿಗೆ ಶರಣಾಗಿದ್ದಾರೆ. ಕೂಡಲೇ ಅವರ ಪತಿ ಅಪಾರ್ಟ್ಮೆಂಟ್‌ನ ಸಿಬ್ಬಂದಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಬ್ಬಂದಿ  ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಶವವನ್ನು ಕೆಳಗಿಳಿಸಿ, ಸರ್ಕಾರಿ ಆಸ್ಪತ್ರೆಗೆ ರವಾನಿಸಿದರೂ ಕೂಡ ಅವರನ್ನು ಉಳಿಸಿಕೊಳ್ಳಲಾಗಲಿಲ್ಲ. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

5 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

5 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

5 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

6 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

6 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

6 hours ago