ದೇಶ- ವಿದೇಶ

ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಹತ್ಯೆ: ಸಿಬಿಐ ತನಿಖೆಗೆ ಮಾಯಾವತಿ ಆಗ್ರಹ

ಉತ್ತರ ಪ್ರದೇಶ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (52 ವರ್ಷ) ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಆಗ್ರಹಿಸಿದ್ದಾರೆ.

ಪರೆಂಬೂರಿನ ಖಾಸಗಿ ಶಾಲೆಯೊಂದರಲ್ಲಿ ಆರ್ಮ್‌ಸ್ಟ್ರಾಂಗ್‌ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕಾನೂನ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಹತ್ಯೆ ಸಂಬಂಧ ಬಂಧಿಸಲಾಗಿರುವ ಎಲ್ಲಾ ಎಂಟು ಮಂದಿ ನಿರಪರಾಧಿಗಳು, ಈ ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮಾಯಾವತಿ ಆಕ್ರೋಶ ವ್ಯಕ್ತಪಡಿಸಿದರು.

ಆರ್ಮ್‌ಸ್ಟ್ರಾಂಗ್‌ ಅವರನ್ನು ಅವರ ಪೆರಂಬೂರು ನಿವಾಸದ ಸಮೀಪ ಆರು ಮಂದಿ ದುಷ್ಕರ್ಮಿಗಳ ಗುಂಪೊಂದು ಹತ್ಯೆ ಮಾಡಿತ್ತು. ಈ ಸಂಬಂಧ ಚೆನ್ನೈ ಪೊಲೀಸ್‌ ಹತ್ತು ವಿಶೇಷ ತಂಡ ರಚನೆ ಮಾಡಿರುವುದಾಗಿ ಹೆಚ್ಚುವರಿ ಪೊಲೀಸ್‌ ಆಯುಕ್ತರು ತಿಳಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

33 mins ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

6 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

6 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

7 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

7 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

7 hours ago