ದೇಶ- ವಿದೇಶ

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ ಪಕ್ಷದ ಮುಖ್ಯಸ್ಥರಾದ ವಿಜಯ್‌ ಅವರಿಂದು ನಾಮಪತ್ರ ಸಲ್ಲಿಸಿದ್ದಾರೆ.

ಹಾಲಿ ಸರ್ಕಾರದ ಅವಧಿ ಮೇ 10 ರಂದು ಮುಕ್ತಾಯಗೊಳ್ಳಲಿದೆ. ಹಾಗಾಗಿ ಏಪ್ರಿಲ್‌ 23 ರಂದು ಒಂದೇ ಹಂತದಲ್ಲಿ 234 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಸಿಎಂ ಎಂ.ಕೆ ಸ್ಟಾಲಿನ್‌ ಅವರು 2011, 2016 ಮತ್ತು 2021 ರಲ್ಲಿ ಗೆದ್ದ ಕೊಲತ್ತೂರ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೂ ಚೊಚ್ಚಲ ಚುನಾವಣೆ ಎದುರಿಸುತ್ತಿರುವ ತಮಿಳಗ ವೆಟ್ರಿ ಕಳಗಂ ಪಕ್ಷದ ವಿಜಯ್ ಚೆನ್ನೈನ ನಗರ ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಪೂರ್ವ ಕ್ಷೇತ್ರಗಳಿಂದ ಸ್ಪರ್ಧೆಗಿಳಿದಿದ್ದಾರೆ.

ಸ್ಟಾಲಿನ್‌ ಅದ್ಧೂರಿ ರೋಡ್‌ ಶೋ
ನಾಮಪತ್ರ ಸಲ್ಲಿಸಿದ ಬಳಿಕ ಅದ್ಧೂರಿ ರೋಡ್‌ ಶೋ ನಡೆಸಿದ ಎಂ.ಕೆ ಸ್ಟಾಲಿನ್‌ ಅವರು, ಮತ್ತೊಮ್ಮೆ ತಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಜನರ ಬೆಂಬಲ ಕೋರಿದರು. ಇದೇ ವೇಳೆ ತಮ್ಮ ಅವಧಿಯಲ್ಲಿ ಕೊಲತ್ತೂರ್‌ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳ ಕುರಿತ ಡಿಎಂಕೆ ಸಾಧನೆಗಳ ಪುಸ್ತಕವನ್ನು ಅನಾವರಣಗೊಳಿಸಿದರು.

ವಿಜಯ್‌(ಟಿವಿಕೆ)ಗೆ ಚೊಚ್ಚಲ ಚುನಾವಣೆ
ಇನ್ನೂ ಚೊಚ್ಚಲ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಟಿವಿಕೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ ಚೆನ್ನೈನ ಪೆರಂಬೂರು ಮತ್ತು ತಿರುಚಿ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇಂದು ವ್ಯಾಸರ್ಪಾಡಿಯ ಡಾ. ಅಂಬೇಡ್ಕರ್ ಸರ್ಕಾರಿ ಕಲಾ ಕಾಲೇಜಿನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್ ಆನಂದ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ಸಿಟಿಆರ್ ನಿರ್ಮಲ್ ಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

30 mins ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

41 mins ago

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

1 hour ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

3 hours ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

3 hours ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

5 hours ago