Mysore
27
few clouds

Social Media

ಸೋಮವಾರ, 13 ಏಪ್ರಿಲ 2026
Light
Dark

ತಮಿಳುನಾಡು ಚುನಾವಣೆ : ಅಫಿಡವಿಟ್‌ನಲ್ಲಿ 2 ಕ್ರಿಮಿನಲ್‌ ಪ್ರಕರಣ ಘೋಷಿಸಿಕೊಂಡ ವಿಜಯ್‌

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಲ್ಲಿಸಿದ ಹೊಸ ಅಫಿಡವಿಟ್‌ನಲ್ಲಿ ತಮ್ಮ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇರುವುದಾಗಿ ಘೋಷಿಸಿದ್ದಾರೆ.

ಮೊದಲು ಪೆರಂಬೂರು ಕ್ಷೇತ್ರದಿಂದ ಮಾರ್ಚ್ 30ರಂದು ಸಲ್ಲಿಸಿದ ನಾಮಪತ್ರದ ಅಫಿಡವಿಟ್‌ನಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂದು ತಿಳಿಸಿದ್ದರು. ಆದರೆ ಏಪ್ರಿಲ್ 3ರಂದು ನೋಟರಿ ಮಾಡಿ ಸಲ್ಲಿಸಿದ ಹೊಸ ಅಫಿಡವಿಟ್‌ನಲ್ಲಿ ಚೆನ್ನೈ ಮತ್ತು ಮದುರೈ ಜಿಲ್ಲೆಗಳಲ್ಲಿ ದಾಖಲಾಗಿರುವ ಎರಡು ಎಫ್‌ಐಆರ್‌ಗಳನ್ನು ಉಲ್ಲೇಖಿಸಿದ್ದಾರೆ.

ಚೆನ್ನೈ ಪೆರವಲ್ಲೂರು ಪೊಲೀಸ್ ಠಾಣೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ಪ್ರಕರಣ. ಮದುರೈ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ಪಕ್ಷದ ಕಾರ್ಯಕ್ರಮದ ವೇಳೆ ಬೌನ್ಸರ್‌ಗಳು ಒಬ್ಬ ವ್ಯಕ್ತಿಯನ್ನು ಥಳಿಸಿ ಗಾಯಗೊಳಿಸಿದ್ದಾರೆ ಎಂಬ ಎರಡು ಆರೋಪಗಳನ್ನು ಉಲ್ಲೇಖಿಸಿ ವಿಜಯ್‌ ಹೊಸ ಅಫಿಡವಿಟ್‌ ಸಲ್ಲಿಸಿದ್ದಾರೆ.

ವಿಜಯ್ ಪೆರಂಬೂರು ಮತ್ತು ತಿರುಚಿರಾಪಳ್ಳಿ ಪೂರ್ವ (ತ್ರಿಚಿ ಈಸ್ಟ್) ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ತಿರುಚಿರಾಪಳ್ಳಿ ಈಸ್ಟ್ ಕ್ಷೇತ್ರಕ್ಕೆ ಏಪ್ರಿಲ್ 2ರಂದು ನಾಮಪತ್ರ ಸಲ್ಲಿಸಿದ್ದರು.

 

Tags:
error: Content is protected !!