ಚೆನ್ನೈ: 234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ತಮಿಳುನಾಡಿನಲ್ಲಿ ಈ ಬಾರಿ ತಮಿಳಗ ವೆಟ್ರಿ ಕಳಗಂ ಪಕ್ಷ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ.
ಸದ್ಯ ನೂರಕ್ಕೂ ಹೆಚ್ಚು ಸ್ಥಾನಗಳಲ್ಲಿ ಟಿವಿಕೆ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ.
ಎಐಎಡಿಎಂಕೆ 60ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಡಿಎಂಕೆ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ.





