Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ತಮಿಳುನಾಡು| BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೈನಾರ್‌ ನಾಗೇಂದ್ರನ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್‌ ನಾಗೇಂದ್ರನ್‌ ಅವರು ಪಕ್ಷದ ರಾಜ್ಯಾಧ್ಯಕ್ಷ ಚುನಾವಣೆಗೆ ಅವಿರೋಧಾಗಿ ಆಯ್ಕೆಯಾಗಿದ್ದಾರೆ.

ನೈನಾರ್‌ ನಾಗೇಂದ್ರನ್‌ ಅವರು ಇಂದು(ಏಪ್ರಿಲ್‌.11) ತಮಿಳುನಾಡಿನ ಟಿ.ನಗರದಲ್ಲಿರುವ ರಾಜ್ಯ ಪ್ರಧಾನ ಕಚೇರಿಯಲ್ಲಿ ಕಮಲಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

ಇನ್ನೂ ಅವರ ನಾಮನಿರ್ದೇಶನವೂ ಪಕ್ಷದ ಹಾಲಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಎಲ್.ಮುರುಗನ್, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಹಾಗೂ ಬಿಜೆಪಿ ಶಾಸಕಿ ವನತಿ ಶ್ರೀನಿವಾಸನ್ ಸೇರಿದಂತೆ ಮುಖ್ಯ ನಾಯಕರಿಂದ ಅನುಮೋದನೆ ಪಡೆದಿದೆ ಎಂದು ಪಕ್ಷ ದೃಢಪಡಿಸಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

 

 

 

Tags:
error: Content is protected !!