ದೇಶ- ವಿದೇಶ

ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ಪಶ್ಚಿಮ ಬಂಗಾಳದ 152 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು, ತಮಿಳುನಾಡಿನಲ್ಲಿ ಎಲ್ಲಾ 234 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.

ಬೆಳಗ್ಗೆ 7:00 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6:00 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ. 5.73 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ 4,023 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಐದು ವರ್ಷಗಳ ಕಾಲ ವಿರೋಧ ಪಕ್ಷದಲ್ಲಿದ್ದ ಎಐಎಡಿಎಂಕೆ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನ ನಡೆಸುತ್ತಿದ್ದರೆ, ಡಿಎಂಕೆ ಅಧಿಕಾರ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದೆ. ಈ ಮಧ್ಯೆ ನಟ ವಿಜಯ ಟಿವಿಕೆ ಪಕ್ಷದೊಟ್ಟಿಗೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಇನ್ನು ಪಶ್ಚಿಮ ಬಂಗಾಳದ ಮೊದಲ ಹಂತದ 152 ವಿಧಾನಸಭಾ ಕ್ಷೇತ್ರಗಳಲ್ಲಿ 1,478 ಅಭ್ಯರ್ಥಿಗಳು ಕಣದಲ್ಲಿದ್ದು, ಅನೇಕ ಘಟಾನುಘಟಿಗಳ ಅಖಾಡದಲ್ಲಿದ್ದಾರೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ತಮ್ಮ ಭದ್ರಕೋಟೆಯಾದ ನಂದಿಗ್ರಾಮ್‌ ಕ್ಷೇತ್ರದಿಂದ ಸ್ಪರ್ಧೆಯಲ್ಲಿದ್ದರೆ, ಭವಾನಿ ಪುರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಖಾಡದಲ್ಲಿದ್ದಾರೆ. ಮೇ 4 ರಂದು ಫಲಿತಾಂಶ ನಡೆಯಲಿದ್ದು, ಅಂದೇ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago