ಚೆನ್ನೈ: ಬಹುಜನ ಸಮಾಜ ಪಕ್ಷದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಯಾವತಿ ಭಾನುವಾರ(ಜು.7) ಒತ್ತಾಯಿಸಿದ್ದಾರೆ.
ಆರ್ಮ್‌ಸ್ಟ್ರಾಂಗ್ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು. ನಂತರು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೂ ಬಂಧಿಸ್ಪಟ್ಟವರು ನಿಜವಾದ ಆರೋಪಿಗಳಲ್ಲ ಎಂದು ಪ್ರತಿಪಾದಿಸಿದ ಮಾಯಾವತಿ, ಸಂತ್ರಸ್ತೆಗೆ ನ್ಯಾಯ ಖಚಿತಪಡಿಸಿಕೊಳ್ಳಲು ತನಿಖೆಯನ್ನು ಕೇಂದ್ರ ಏಜೆನ್ಸಿಗೆ ವರ್ಗಾಯಿಸಿ ಎಂದು ತಮಿಳುನಾಡು ಮುಖ್ಯಂತ್ರಿ ಸ್ಟಾಲಿನ್ ಅವರನ್ನು ಒತ್ತಾಯಿಸಿದರು.
ಆರ್ಮ್‌ಸ್ಟ್ರಾಂಗ್ ನ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ ಮಯಾವತಿ ಅವರು, ದಾಳಿಕೋರರ ಗುಂಪು ಕೊಂದ ರೀತಿ ನೋಡಿದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಶಂಕಿತರು ನಿಜವಾದ ಆರೋಪಿಗಳಲ್ಲ. ತನಿಖೆಯನ್ನು ತಕ್ಷಣವೇ ಸಿಬಿಐಗೆ ವಹಿಸಿ. ಆರ್ಮ್‌ಸ್ಟ್ರಾಂಗ್ ಹತ್ಯೆಯ ನಂತರ ರಾಜ್ಯದ ದಲಿತರು ಆತಂಕಕ್ಕೊಳಗಾಗಿದ್ದಾರೆ ಮತ್ತು ಸುರಕ್ಷತೆಯಿಲ್ಲವಾಗಿದೆ ಎಂದು ಆರೋಪಿಸಿದರು.
ಬಿಎಸ್‌ಪಿಯು ಈ ಹತ್ಯೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಆದರೆ ಪಕ್ಷದ ಕಾರ್ಯಕರ್ತರು ಯಾವುದೇ ಕಾನೂನು ಮತ್ತು ಸುವ್ಯವಸ್ಥೆಯನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು ಎಂದು ಬಿಎಸ್‌ಪಿ ನಾಯಕಿ ಹೇಳಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…