ದೇಶ- ವಿದೇಶ

ತಮಿಳುನಾಡು ಬಿಎಸ್‌ಪಿ ರಾಜ್ಯಧ್ಯಕ್ಷ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಮಾಯಾವತಿ ಆಗ್ರಹ

ಚೆನ್ನೈ: ಬಹುಜನ ಸಮಾಜ ಪಕ್ಷದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಆರ್ಮ್ ಸ್ಟ್ರಾಂಗ್‌ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಯಾವತಿ ಭಾನುವಾರ(ಜು.7) ಒತ್ತಾಯಿಸಿದ್ದಾರೆ.

ಆರ್ಮ್‌ಸ್ಟ್ರಾಂಗ್ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು. ನಂತರು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೂ ಬಂಧಿಸ್ಪಟ್ಟವರು ನಿಜವಾದ ಆರೋಪಿಗಳಲ್ಲ ಎಂದು ಪ್ರತಿಪಾದಿಸಿದ ಮಾಯಾವತಿ, ಸಂತ್ರಸ್ತೆಗೆ ನ್ಯಾಯ ಖಚಿತಪಡಿಸಿಕೊಳ್ಳಲು ತನಿಖೆಯನ್ನು ಕೇಂದ್ರ ಏಜೆನ್ಸಿಗೆ ವರ್ಗಾಯಿಸಿ ಎಂದು ತಮಿಳುನಾಡು ಮುಖ್ಯಂತ್ರಿ ಸ್ಟಾಲಿನ್‌ ಅವರನ್ನು ಒತ್ತಾಯಿಸಿದರು.

ಆರ್ಮ್‌ಸ್ಟ್ರಾಂಗ್ ನ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ ಮಯಾವತಿ ಅವರು, ದಾಳಿಕೋರರ ಗುಂಪು ಕೊಂದ ರೀತಿ ನೋಡಿದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಶಂಕಿತರು ನಿಜವಾದ ಆರೋಪಿಗಳಲ್ಲ. ತನಿಖೆಯನ್ನು ತಕ್ಷಣವೇ ಸಿಬಿಐಗೆ ವಹಿಸಿ. ಆರ್ಮ್‌ಸ್ಟ್ರಾಂಗ್ ಹತ್ಯೆಯ ನಂತರ ರಾಜ್ಯದ ದಲಿತರು ಆತಂಕಕ್ಕೊಳಗಾಗಿದ್ದಾರೆ ಮತ್ತು ಸುರಕ್ಷತೆಯಿಲ್ಲವಾಗಿದೆ ಎಂದು ಆರೋಪಿಸಿದರು.

ಬಿಎಸ್‌ಪಿಯು ಈ ಹತ್ಯೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಆದರೆ ಪಕ್ಷದ ಕಾರ್ಯಕರ್ತರು ಯಾವುದೇ ಕಾನೂನು ಮತ್ತು ಸುವ್ಯವಸ್ಥೆಯನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು ಎಂದು ಬಿಎಸ್‌ಪಿ ನಾಯಕಿ ಹೇಳಿದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago