ಚೆನ್ನೈ: ರಾಜಕೀಯಕ್ಕೆ ಬರುವ ಹಾದಿಯಲ್ಲಿ ನಿಂತಿರುವ ತಮಿಳು ನಟ ತಳಪತಿ ವಿಜಯ್ ಇದೇ ಮೊದಲ ಬಾರಿಗೆ ತಮಿಳುನಾಡಿನ ಆಢಳಿತರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿಸ್ ಸರ್ಕಾರ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ನಟ ವಿಜಯ್ ಆಕ್ರೋಶ ಹೊರಹಾಕಿದ್ದಾರೆ.
ತಮಿಳುನಾಡು ರಾಜ್ಯದಲ್ಲಿ ಮಾದಕ ವಸ್ತುಗಳನ್ನು ಎಗ್ಗಿಲ್ಲದೆ ಹಂಚಲಾಗುತ್ತಿದೆ. ಯುವಕರನ್ನು ಮಾದಕ ವಸ್ತುಗಳ ವ್ಯಸನದಿಂದ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಆದರೆ, ಡಿಎಂಕೆ ಸರ್ಕಾರ ಈ ವಿಚಾರದಲ್ಲಿ ಸಂಪೂರ್ಣವಾಗಿ ಸೋಲು ಕಂಡಿದೆ. ಇದು ರಾಜ್ಯದ ಮಟ್ಟಿಗೆ ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ ರಾಜ್ಯಕ್ಕೆ ಉತ್ತಮ ನಾಯಕರ ಅಗತ್ಯತೆ ಇದೆ ಎಂದು ವಿಜಯ್ ಅಭಿಪ್ರಾಯಪಟ್ಟಿದ್ದಾರೆ.
2026 ರಲ್ಲಿ ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಪಕ್ಷ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಇತ್ತೀಚೆಗಷ್ಟೇ ನಟ ವಿಜಯ್ ತೀರ್ಮಾನಿಸಿದ್ದು, ಇದೀಗ ತಮ್ಮ ರಾಜಕೀಯ ಹೋರಾಟದ ಮೊದಲ ಹೆಚ್ಚೆ ಇಟ್ಟಿದ್ದು, ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ಡ್ರಗ್ಸ್ ಚಾಟಿ ಬೀಸಿದ್ದಾರೆ.
ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…
ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…
ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…
ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…
ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…