ದೇಶ- ವಿದೇಶ

ತಮಿಳುನಾಡು: ಸಿಎಂ ಸ್ಟಾಲಿನ್‌ ವಿರುದ್ಧ ತಳಪತಿ ವಿಜಯ್‌ ವಾಗ್ದಾಳಿ

ಚೆನ್ನೈ: ರಾಜಕೀಯಕ್ಕೆ ಬರುವ ಹಾದಿಯಲ್ಲಿ ನಿಂತಿರುವ ತಮಿಳು ನಟ ತಳಪತಿ ವಿಜಯ್‌ ಇದೇ ಮೊದಲ ಬಾರಿಗೆ ತಮಿಳುನಾಡಿನ ಆಢಳಿತರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿಸ್‌ ಸರ್ಕಾರ ರಾಜ್ಯದಲ್ಲಿ ಡ್ರಗ್ಸ್‌ ಮಾಫಿಯಾ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ನಟ ವಿಜಯ್‌ ಆಕ್ರೋಶ ಹೊರಹಾಕಿದ್ದಾರೆ.

ತಮಿಳುನಾಡು ರಾಜ್ಯದಲ್ಲಿ ಮಾದಕ ವಸ್ತುಗಳನ್ನು ಎಗ್ಗಿಲ್ಲದೆ ಹಂಚಲಾಗುತ್ತಿದೆ. ಯುವಕರನ್ನು ಮಾದಕ ವಸ್ತುಗಳ ವ್ಯಸನದಿಂದ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಆದರೆ, ಡಿಎಂಕೆ ಸರ್ಕಾರ ಈ ವಿಚಾರದಲ್ಲಿ ಸಂಪೂರ್ಣವಾಗಿ ಸೋಲು ಕಂಡಿದೆ. ಇದು ರಾಜ್ಯದ ಮಟ್ಟಿಗೆ ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ ರಾಜ್ಯಕ್ಕೆ ಉತ್ತಮ ನಾಯಕರ ಅಗತ್ಯತೆ ಇದೆ ಎಂದು ವಿಜಯ್‌ ಅಭಿಪ್ರಾಯಪಟ್ಟಿದ್ದಾರೆ.

2026 ರಲ್ಲಿ ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್‌ ಅವರ ಪಕ್ಷ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಇತ್ತೀಚೆಗಷ್ಟೇ ನಟ ವಿಜಯ್‌ ತೀರ್ಮಾನಿಸಿದ್ದು, ಇದೀಗ ತಮ್ಮ ರಾಜಕೀಯ ಹೋರಾಟದ ಮೊದಲ ಹೆಚ್ಚೆ ಇಟ್ಟಿದ್ದು, ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ಡ್ರಗ್ಸ್‌ ಚಾಟಿ ಬೀಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

10 mins ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

32 mins ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

1 hour ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

2 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago