ದೇಶ- ವಿದೇಶ

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ 299 ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿತ್ತು. ಬಿಎನ್‌ಪಿ 212 ಸ್ಥಾನಗಳಲ್ಲಿ ಗೆದ್ದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಇದರೊಂದಿಗೆ ಮಾಜಿ ಪ್ರಧಾನಿ, ಇತ್ತೀಚಿಗೆ ನಿಧನ ಹೊಂದಿದ ಖಲೀದಾ ಜಿಯಾ ಅವರ ಪುತ್ರ ತಾರಿಖ್ ರೆಹಮಾನ್ ಹೊಸ ಪ್ರಧಾನಿಯಾಗುವುದು ನಿಚ್ಚಳವಾಗಿದೆ.

2024ರ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಆಡಳಿತ ಪತನಗೊಂಡಿತ್ತು. ನಂತರ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಮಧ್ಯಂತರ ಸರ್ಕಾರದ ಬದಲು ಜನರಿಂದ ನೇರವಾಗಿ ಆಯ್ಕೆಯಾದ ಸರ್ಕಾರದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಪ್ರಧಾನಿ ಮೋದಿ ಅಭಿನಂದನೆ
ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್‌ಪಿಯನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದ ತಾರಿಕ್ ರೆಹಮಾನ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಗೆಲುವು ಬಾಂಗ್ಲಾ ಜನರು ನಿಮ್ಮ ನಾಯಕತ್ವದ ಮೇಲಿಟ್ಟಿರುವ ನಂಬಿಕೆಯನ್ನು ತೋರಿಸುತ್ತಿದೆ. ಭಾರತ ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನಿಲ್ಲುವುದನ್ನು ಮುಂದುವರಿಸುತ್ತದೆ. ನಮ್ಮ ಸಂಬಂಧಗಳನ್ನು ಬಲಪಡಿಸಲು ಹಾಗು ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

1 hour ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

2 hours ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

2 hours ago

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…

2 hours ago

ಓದುಗರ ಪತ್ರ: ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರುಣಿಸಿ

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…

3 hours ago

ಓದುಗರ ಪತ್ರ: ವಾಣಿಜ್ಯ ಸಿಲಿಂಡರ್ ದರ ಏರಿಕೆ ಬರೆ

ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್‌ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್‌ಗಳಲ್ಲಿ…

3 hours ago