ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ 299 ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿತ್ತು. ಬಿಎನ್‌ಪಿ 212 ಸ್ಥಾನಗಳಲ್ಲಿ ಗೆದ್ದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಇದರೊಂದಿಗೆ ಮಾಜಿ ಪ್ರಧಾನಿ, ಇತ್ತೀಚಿಗೆ ನಿಧನ ಹೊಂದಿದ ಖಲೀದಾ ಜಿಯಾ ಅವರ ಪುತ್ರ ತಾರಿಖ್ ರೆಹಮಾನ್ ಹೊಸ ಪ್ರಧಾನಿಯಾಗುವುದು ನಿಚ್ಚಳವಾಗಿದೆ.
2024ರ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಆಡಳಿತ ಪತನಗೊಂಡಿತ್ತು. ನಂತರ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಮಧ್ಯಂತರ ಸರ್ಕಾರದ ಬದಲು ಜನರಿಂದ ನೇರವಾಗಿ ಆಯ್ಕೆಯಾದ ಸರ್ಕಾರದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.
ಪ್ರಧಾನಿ ಮೋದಿ ಅಭಿನಂದನೆ
ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್‌ಪಿಯನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದ ತಾರಿಕ್ ರೆಹಮಾನ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಗೆಲುವು ಬಾಂಗ್ಲಾ ಜನರು ನಿಮ್ಮ ನಾಯಕತ್ವದ ಮೇಲಿಟ್ಟಿರುವ ನಂಬಿಕೆಯನ್ನು ತೋರಿಸುತ್ತಿದೆ. ಭಾರತ ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನಿಲ್ಲುವುದನ್ನು ಮುಂದುವರಿಸುತ್ತದೆ. ನಮ್ಮ ಸಂಬಂಧಗಳನ್ನು ಬಲಪಡಿಸಲು ಹಾಗು ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…