Mysore
21
heavy intensity rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಎನ್‌ಪಿ ಆಹ್ವಾನ ನೀಡಿದೆ.

ಬಾಂಗ್ಲಾದೇಶದ ಸಂಸತ್‌ ಭವನದ ಸೌತ್‌ ಪ್ಲಾಜಾದಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭಕ್ಕೆ ದಕ್ಷಿಣ ಏಷ್ಯಾದ ಅನೇಕ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಭಾರತಕ್ಕೂ ಆಹ್ವಾನ ನೀಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವಂತೆ ಬಿಎನ್‌ಪಿ ಮನವಿ ಮಾಡಿದೆ.

 

Tags:
error: Content is protected !!