Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ತೆಲುಗು ಚಲನಚಿತ್ರ ನಿರ್ಮಾಪಕ ಕೆ.ಪಿ.ಚೌಧರಿ ಆತ್ಮಹತ್ಯೆ

ಪಣಜಿ: ತೆಲುಗು ಚಲನಚಿತ್ರ ನಿರ್ಮಾಪಕ ಕೆ.ಪಿ.ಚೌಧರಿ ಅವರು ಇಂದು ಉತ್ತರ ಗೋವಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಚೌಧರಿ ಅವರ ಮೃತದೇಹವು ಸಿಯೋಲಿಮ್‌ ಗ್ರಾಮದ ಬಾಡಿಗೆ ಮನೆಯಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಜಿನಿಕಾಂತ್‌ ಅಭಿನಯದ ಕಬಾಲಿ ಚಿತ್ರವನ್ನು ನಿರ್ಮಿಸಿ ಯಶಸ್ವಿಯಾಗಿದ್ದರು. ಚೌಧರಿ ಅವರನ್ನು 2023ರಲ್ಲಿ ಸೈಬರಾಬಾದ್‌ ವಿಶೇಷ ಕಾರ್ಯಾಚರಣೆ ತಂಡವು ಡ್ರಗ್ಸ್‌ ಕೇಸ್‌ನಲ್ಲಿ ಬಂಧಿಸಿತ್ತು.

Tags:
error: Content is protected !!