Mysore
14
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ತೆಲಂಗಾಣ : ಸಂಪುಟಕ್ಕೆ ಮೊಹಮ್ಮದ ಅಜರುದ್ದೀನ್‌ ಸೇರ್ಪಡೆ

ಹೈದರಾಬಾದ್ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಇಂದು ತೆಲಂಗಾಣ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ರಾಜಭವನದಲ್ಲಿ ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ಸಚಿವರು ಭಾಗವಹಿಸಿದ್ದರು.

ಇದನ್ನೂ ಓದಿ:-ಮೈಸೂರು | ಮನೆಯಲ್ಲಿ ಕಳ್ಳತನ ; ಸುಮಾರು 1 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳು ಕಳ್ಳರ ಪಾಲು

ಬಿಆರ್‌ಎಸ್ ಶಾಸಕ ಮಾಗಂಟಿ ಗೋಪಿನಾಥ್ ಅವರು ಜೂನ್‌ನಲ್ಲಿ ಹೃದಯಾಘಾತದಿಂದ ನಿಧನರಾದ ನಂತರ ಈ ಕ್ಷೇತ್ರ ತೆರವಾಗಿತ್ತು. ಅಜರುದ್ದೀನ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ತೆಲಂಗಾಣ ಸರ್ಕಾರ ಆಗಸ್ಟ್ ಕೊನೆಯ ವಾರದಲ್ಲಿ ನಾಮನಿರ್ದೇಶನ ಮಾಡಿತ್ತು.

ಹೈದರಾಬಾದ್‌ನವರಾದ ಅಜರುದ್ದೀನ್ ೧೯೯೨, ೧೯೯೬ ಮತ್ತು ೧೯೯೯ರ ಏಕದಿನ ವಿಶ್ವಕಪ್‌ಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದರು.

Tags:
error: Content is protected !!