ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್‍ನ ಶ್ರೀಶೈಲಂ ಅಣೆಕಟ್ಟೆಯ ಹಿಂದೆ ಕುಸಿದಿರುವ ಸುರಂಗದೊಳಗೆ ಕಳೆದ 48 ಗಂಟೆಗಳಿಂದ ಸಿಲುಕಿಕೊಂಡಿರುವ ಎಂಟು ಕಾರ್ಮಿಕರನ್ನು ಹೊರತರಲು ರಕ್ಷಣಾ ಪಡೆಗಳು ಸಮರೋಪಾದಿಯಲ್ಲಿ ಕಾರ್ಯಚರಣೆ ಮಾಡುತ್ತಿವೆ. ಇದೀಗ ರಕ್ಷಣಾ ಕಾರ್ಯಕ್ಕೆ ಸಿಲ್ಕ್ಯಾರಾ ತಂಡದ ಸೇರ್ಪಡೆಯಾಗಿದೆ.
ಸುರಂಗದೊಳಗೆ ಬಿದ್ದಿರುವ ಮಣ್ಣಿನ ರಾಶಿ ಮತ್ತು ನೀರು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಕಾರ್ಮಿಕರು ಬದುಕುಳಿಯುವ ಸಾಧ್ಯತೆಗಳು ಕಡಿಮೆ ಎಂದು ರಾಜ್ಯದ ಸಚಿವರು ಹೇಳಿದ್ದಾರೆ.
ನಾಗರ್ಕರ್ನೂಲ್‍ನ ಶ್ರೀಶೈಲಂ ಅಣೆಕಟ್ಟೆಯ ಹಿಂದೆ ಇರುವ 44 ಕಿಮೀ ಉದ್ದದ ಸುರಂಗವು, ಶನಿವಾರ ಬೆಳಿಗ್ಗೆ ಕೆಲವು ಕಾರ್ಮಿಕರು ಒಳಗೆ ಸೋರಿಕೆಯನ್ನು ಸರಿಪಡಿಸುತ್ತಿದ್ದಾಗ ಕುಸಿದು ಬಿದ್ದಿತು. ಹೆಚ್ಚಿನ ಕಾರ್ಮಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೂ, ಎಂಟು ಮಂದಿ ಒಳಗೆ ಸಿಕ್ಕಿಹಾಕಿಕೊಂಡು ಶನಿವಾರದಿಂದ ಸಂಪರ್ಕ ಕಳೆದುಕೊಂಡಿದ್ದಾರೆ.
ಸುರಂಗದೊಳಗೆ ಕೆಸರು ತುಂಬಾ ಎತ್ತರಕ್ಕೆ ಸಂಗ್ರಹವಾಗಿದ್ದು, ನಡೆಯಲು ಅಸಾಧ್ಯವಾಗಿದೆ. ರಕ್ಷಣಾ ತಂಡವು ರಬ್ಬರ್ ಟ್ಯೂಬ್‍ಗಳು ಮತ್ತು ಮರದ ಹಲಗೆಗಳನ್ನು ಬಳಸುತ್ತಿದೆ. ಕಾರ್ಮಿಕರು ಬದುಕುಳಿಯುವ ಸಾಧ್ಯತೆಗಳು ಕ್ಷೀಣಿಸಿದೆ. ಆದರೆ ನಾವು ಆಶಾವಾದಿಗಳಾಗಿz?ದÉ?ವೆ. ಪ್ರಯತ್ನವನ್ನು ಮುಂದುವರಿಸಿz?ದÉ?ವೆ ಎಂದು ಬಚಿವ ರಾವ್ ಹೇಳಿದ್ದಾರೆ.
ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಪರಿಸ್ಥಿತಿಯನ್ನು ಅವಲೋಕನ ಮಾಡಲಾಗುತ್ತಿದೆ. ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ, ನಿನ್ನೆ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಕರೆ ಮಾಡಿ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಸಹಾಯ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…