Mysore
36
clear sky

Social Media

ಮಂಗಳವಾರ, 14 ಏಪ್ರಿಲ 2026
Light
Dark

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ ನೀಡಿದೆ.

ದೆಹಲಿ, ಛತ್ತೀಸ್‌ಗಢ, ಒಡಿಶಾ, ಪೂರ್ವ ಮಧ್ಯಪ್ರದೇಶದಲ್ಲಿ ಉಷ್ಣ ಅಲೆ ಬೀಸಲಿದೆ. ಪಶ್ಚಿಮ ಬಂಗಾಳ, ಜಾರ್ಖಂಡ್‌, ಗುಜರಾತ್‌, ಸೌರಾಷ್ಟ್ರ, ಕಚ್‌ ಸೇರಿದಂತೆ ಹಲವೆಡೆ ಬಿಸಿ ಗಾಳಿ ಮುಂದುವರಿಯಲಿದೆ.

ಒಡಿಶಾ, ಗುಜರಾತ್‌, ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಮುಂದಿನ ಏಳು ದಿನಗಳ ಕಾಲ ಬಿಸಿ ವಾತಾವರಣ ಇರಲಿದೆ.

Tags:
error: Content is protected !!