ಹೈದರಾಬಾದ್: ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದಾರೆ.
ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ 20 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್ ಮೇಲೆ ಜಲ್ಲಿಕಲ್ಲಿ ತುಂಬಿದ್ದ ಟಿಪ್ಪರ್ ಮಗುಚಿಬಿದ್ದು ಅಪಘಾತ ಸಂಭವಿಸಿದೆ.
ಇದನ್ನು ಓದಿ: ಟಿಪ್ಪರ್-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು
ತೆಲಂಗಾಣದ ಸರ್ಕಾರಿ ಬಸ್‌ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಗಾಯಗೊಂಡ ಹಲವಾರು ಜನರು ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.





