Mysore
24
mist

Social Media

ಶುಕ್ರವಾರ, 14 ನವೆಂಬರ್ 2025
Light
Dark

ದೆಹಲಿಯಲ್ಲಿ ಭಯಾನಕ ಘಟನೆ…! ಗನ್‌ಪಾಯಿಂಟ್‌ನಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ, ಮಹಡಿಯಿಂದ ನೂಕಿದ ದುಷ್ಕರ್ಮಿ

ನವದೆಹಲಿ: ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರದ ಭೀಕರತೆ ಕಣ್ಣಿಂದ ಮಾಸುವ ಮುನ್ನವೇ ಮತ್ತೊಂದು ಹೇಯ ಕೃತ್ಯ ದೆಹಲಿಯ ದ್ವಾರಕ ಪ್ರದೇಶದಲ್ಲಿ ನಡೆದಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗನ್‌ ಪಾಯಿಂಟ್‌ನಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ 5ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹೇಯ ಕೃತ್ಯ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದ ಸಮಯದಲ್ಲಿ ದುಷ್ಕರ್ಮಿ ಆಕೆಯನ್ನು ಅಪಹರಿಸಿ ಸಮೀಪದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಕಟ್ಟಡದ 5ನೇ ಮಹಡಿಯಿಂದ ಕೆಳಗೆ ತಳ್ಳಿದ್ದಾನೆ.

ಸಂತ್ರಸ್ತೆ ಬಾಲಕಿಯು ದೆಹಲಿಯ ದೀನ್‌ ದಯಾಳ್‌ ಉಪಾಧ್ಯಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಾಲಕಿಯ ಒಂದು ಕಾಲು ಮುರಿದಿದೆ.

ತನ್ನ ಮೇಲೆ ಅತ್ಯಾಚಾರ ಎಸಗಿ ಬಹುಮಹಡಿಯಿಂದ ಕಟ್ಟಡದಿಂದ ದೂಡಲಾಯಿತು ಎಂದು ಬಾಲಕಿಯು ಪೊಲೀಸರಿಗೆ ಹೇಳಿಕೆ ನೀಡಿದ್ದು, ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಪೋಕ್ಸೊ ಕಾಯ್ದೆಗಳ ವಿವಿಧ ಸೆಕ್ಸನ್‌ಗಳಡಿ ಪೊಲೀಸರು ಪ್ರಕರಣ  ದಾಖಲಿಸಿಕೊಂಡಿದ್ದಾರೆ.

 

Tags:
error: Content is protected !!