ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರ ಮೇಲೆ ಫೈರಿಂಗ್ ನಡೆಸಿ ಪರಾರಿಯಾಗಿದ್ದಾರೆ.
ಗುಂಡಿನ ದಾಳಿಗೆ ಸಿಲುಕಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ. ಉಗ್ರರಿಗಾಗಿ ಭಾರತೀಯ ಸೇನೆ ಹಾಗೂ ಪೊಲೀಸರಿಂದ ಹುಡುಕಾಟ ಶುರುವಾಗಿದೆ.
ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ 28 ಜನರನ್ನು ಬಲಿ ಪಡೆದ ಬೆನ್ನಲ್ಲೇ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ ಚುರುಕುಗೊಳಿಸಿದೆ.
ಜಮ್ಮು-ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ನೆಲಸಮ ಮಾಡಲಾಗುತ್ತಿದ್ದು, ಈಗಾಗಲೇ 7 ಉಗ್ರರ ಮನೆಗಳನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಈ ಬೆನ್ನಲ್ಲೇ ಈಗ ಮತ್ತೋರ್ವ ಉಗ್ರನ ಮನೆಯನ್ನು ಬಾಂಬ್ ಸ್ಫೋಟಿಸಿ ಧ್ವಂಸ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿರುವ ಸೇನಾಧಿಕಾರಿಗಳು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಇತರರ ವಿರುದ್ಧವೂ ಇದೇ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.





