ದೇಶ- ವಿದೇಶ

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ನಾಗರಿಕ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರ ಮೇಲೆ ಫೈರಿಂಗ್‌ ನಡೆಸಿ ಪರಾರಿಯಾಗಿದ್ದಾರೆ.

ಗುಂಡಿನ ದಾಳಿಗೆ ಸಿಲುಕಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ. ಉಗ್ರರಿಗಾಗಿ ಭಾರತೀಯ ಸೇನೆ ಹಾಗೂ ಪೊಲೀಸರಿಂದ ಹುಡುಕಾಟ ಶುರುವಾಗಿದೆ.

ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ 28 ಜನರನ್ನು ಬಲಿ ಪಡೆದ ಬೆನ್ನಲ್ಲೇ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ ಚುರುಕುಗೊಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ನೆಲಸಮ ಮಾಡಲಾಗುತ್ತಿದ್ದು, ಈಗಾಗಲೇ 7 ಉಗ್ರರ ಮನೆಗಳನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಈ ಬೆನ್ನಲ್ಲೇ ಈಗ ಮತ್ತೋರ್ವ ಉಗ್ರನ ಮನೆಯನ್ನು ಬಾಂಬ್‌ ಸ್ಫೋಟಿಸಿ ಧ್ವಂಸ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಸೇನಾಧಿಕಾರಿಗಳು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಇತರರ ವಿರುದ್ಧವೂ ಇದೇ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

3 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

3 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

3 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

3 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

4 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

4 hours ago