Mysore
23
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ: ದೆಹಲಿಯಲ್ಲಿ ಸರ್ವ ಪಕ್ಷ ಸಭೆ

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಇಂದು ಸರ್ವ ಪಕ್ಷ ಸಭೆ ನಡೆದಿದೆ.

ಸಂಸತ್‌ ಭವನದ ಸಂಕೀರ್ಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಈ ಸಭೆಗೂ ಮುನ್ನ ಕಾಶ್ಮೀರದ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದವರಿಗೆ ಒಂದು ನಿಮಿಷ ಮೌನಾಚರಣೆ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ವಿದೇಶಾಂಗ ಸಚಿವ ಜೈಶಂಕರ್‌, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ನಾಯಕ ಪ್ರಫುಲ್‌ ಪಟೇಲ್‌, ಆಮ್‌ ಆದ್ಮಿ ಪಕ್ಷದ ಸಂಜಯ್‌ ಸಿಂಗ್‌ ಸೇರಿದಂತೆ ಹಲವು ನಾಯಕರು ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಿದ್ದರು.

ಸಭೆಯಲ್ಲಿ ವಿಪಕ್ಷ ನಾಯಕರು ಮಾತನಾಡಿ, ಈ ವಿಚಾರದಲ್ಲಿ ನಾವು ಕೇಂದ್ರದ ಜೊತೆ ಇದ್ದೇವೆ. ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ನಾವು ಕೂಡ ಕೇಂದ್ರದ ಜೊತೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್‌ಗೆ ನಾಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿ ನೀಡಿ, ದುರಂತ ನಡೆದ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!