ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸರ್ವ ಪಕ್ಷ ಸಭೆ ನಡೆದಿದೆ.
ಸಂಸತ್ ಭವನದ ಸಂಕೀರ್ಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಈ ಸಭೆಗೂ ಮುನ್ನ ಕಾಶ್ಮೀರದ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದವರಿಗೆ ಒಂದು ನಿಮಿಷ ಮೌನಾಚರಣೆ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಜೈಶಂಕರ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್, ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್ ಸೇರಿದಂತೆ ಹಲವು ನಾಯಕರು ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಿದ್ದರು.
ಸಭೆಯಲ್ಲಿ ವಿಪಕ್ಷ ನಾಯಕರು ಮಾತನಾಡಿ, ಈ ವಿಚಾರದಲ್ಲಿ ನಾವು ಕೇಂದ್ರದ ಜೊತೆ ಇದ್ದೇವೆ. ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ನಾವು ಕೂಡ ಕೇಂದ್ರದ ಜೊತೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್‌ಗೆ ನಾಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ, ದುರಂತ ನಡೆದ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…