ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 27 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಹಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 27 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದು, ಅವರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಓರ್ವರು ಬಲಿಯಾಗಿದ್ದಾರೆ.
ಗುಂಡಿನ ದಾಳಿಯಲ್ಲಿ 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದಾಳಿಯನ್ನು ಖಂಡಿಸಿದ ಪ್ರಧಾನಿ ಮೋದಿ ಅವರು, ದಾಳಿ ಹಿಂದೆ ಯಾರಿದ್ದಾರೆ ಅವರನ್ನು ಸುಮ್ಮನೆ ಬಿಡುವುದಿಲ್ಲ. ಹೀನ ಕೃತ್ಯ ಎಸಗಿರುವವರನ್ನು ಕಟಕಟೆ ಮುಂದೆ ನಿಲ್ಲಿಸುತ್ತೇವೆ. ಭಯೋತ್ಪಾದನೆ ವಿರುದ್ಧ ನಮ್ಮ ಹೋರಾಟ ಅಚಲ ಎಂದು ಟ್ವೀಟ್‌ನಲ್ಲಿ ಭಯೋತ್ಪಾದಕರಿಗೆ ಎಚ್ಚರಿಕೆ ನೀಡಿದ್ದಾರೆ.


