Mysore
18
scattered clouds

Social Media

ಶನಿವಾರ, 31 ಜನವರಿ 2026
Light
Dark

ಉಗ್ರರು ತಮ್ಮ ಮನೆಗಳಲ್ಲೂ ಸುರಕ್ಷಿತವಾಗಿರಲ್ಲ ಎಂದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನಕ್ಸಲರು ಈಗ ತಮ್ಮ ಮನೆಗಳಲ್ಲೂ ಸುರಕ್ಷಿತವಾಗಿಲ್ಲ, ಕಾಲ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಎಚ್.ಟಿ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರಗಳು ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ತಕ್ಕಂತೆ ನೀತಿಗಳನ್ನು ರೂಪಿಸುತ್ತಿದ್ದರೆ, ಪ್ರಸ್ತುತ ಸರ್ಕಾರವು ಸರ್ಕಾರದ ಮೇಲಿನ ಜನರ ನಂಬಿಕೆಯನ್ನು ಪುನಃಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳುತ್ತಿದೆ ಎಂದರು.

ನಮ್ಮ ಸರ್ಕಾರವು ಜನರ, ಜನರಿಂದ ಮತ್ತು ಜನರಿಗಾಗಿ ಪ್ರಗತಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ತಮ್ಮ ಸರ್ಕಾರದ ಬಗ್ಗೆ ಸಂತಸ ವ್ಯಕ್ತಪಡಿಸಿ ಮಾತು ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಹಲವು ದೇಶಗಳಲ್ಲಿ ಪ್ರತಿ ಚುನಾವಣೆಗೂ ಸರ್ಕಾರಗಳು ಬದಲಾಗುತ್ತಿವೆ. ಆದರೆ ಭಾರತದಲ್ಲಿ ಜನರು ಮೂರನೇ ಬಾರಿಗೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಹಿಂದಿನ ಸರ್ಕಾರಗಳು ಚುನಾವಣೆಗಳನ್ನು ಗೆಲ್ಲಲು ನೀತಿಗಳನ್ನು ರೂಪಿಸುತ್ತಿದ್ದವು. ಆದರೆ ನಮ್ಮ ಸರ್ಕಾರ ಜನರ ನಂಬಿಕೆಯನ್ನು ಪುನಃಸ್ಥಾಪಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಭಯೋತ್ಪಾದಕ ದಾಳಿ ಬಗ್ಗೆ ಮಾತನಾಡಿದ ಅವರು, ಭಯೋತ್ಪಾದಕರು ಈಗ ತಮ್ಮ ಮನೆಗಳಲ್ಲೂ ಅಸುರಕ್ಷಿತ ಎಂಬ ಭಾವನೆ ಹೊಂದಿದ್ದಾರೆ. ಈಗ ಸಮಯ ಬದಲಾಗಿದೆ ಎಂದರು.

Tags:
error: Content is protected !!