ದೇಶ- ವಿದೇಶ

ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರರು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಗಡಿಗೆ ಹೊಂದಿಕೊಂಡಿರುವ ಫರೀದಾಬಾದ್‍ನಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಸ್ಫೋಟಕ ವಸ್ತುಗಳು, ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಬಳಸಲು ಉಗ್ರರು ಸಂಚು ರೂಪಿಸಿದ್ದರು ಎಂಬುದು ಗೊತ್ತಾಗಿದೆ.

ಫರೀದಾಬಾದ್‍ನಲ್ಲಿ ನಡೆದ ದಾಳಿ ತಡೆ ಕಾರ್ಯಾಚರಣೆಯಲ್ಲಿ ಪೊಲೀಸರು ಹಾಗೂ ತನಿಖಾ ಸಂಸ್ಥೆಗಳು ಸುಮಾರು 2,900 ಕಿಲೋಗ್ರಾಂ ಸ್ಫೋಟಕ ಸಾಮಗ್ರಿ ಮತ್ತು ಆಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ. ತನಿಖೆಯಿಂದ ಈ ವಸ್ತುಗಳು ರಾಷ್ಟ್ರದ ಹೃದಯ ಭಾಗದಲ್ಲೇ ಬೃಹತ್ ದಾಳಿ ನಡೆಸುವ ಉದ್ದೇಶದ ಭಾಗವಾಗಿದ್ದವು ಎಂಬುದು ಸ್ಪಷ್ಟವಾಗಿದೆ.

ಈ ಸಂಚು ಒಬ್ಬ ವೈದ್ಯರ ನಿವಾಸದಿಂದ ನೇರವಾಗಿ ಸಂಪರ್ಕ ಹೊಂದಿತ್ತು. ಶಿಕ್ಷಣ ಪಡೆದ ವ್ಯಕ್ತಿಗಳು ಉಗ್ರ ಚಟುವಟಿಕೆಯಲ್ಲಿ ತೊಡಗಿರುವುದು ತನಿಖಾ ಸಂಸ್ಥೆಗಳಿಗೆ ಹೊಸ ಸವಾಲು. ಅಧಿಕಾರಿಗಳ ಪ್ರಕಾರ, ಇದು ಹೊಸ ಮಾದರಿಯ ಉಗ್ರ ಚಟುವಟಿಕೆ ವೈಟ್ ಕಾಲರ್ ಜಿಹಾದ್ ಆಗಿದೆ.

ಹಾಗಾಗಿ ಫರೀದಾಬಾದ್ ಕೇವಲ ಕಾಕತಾಳೀಯ ಘಟನೆಯಲ್ಲ. ಇದು ಪೂರ್ವನಿಯೋಜಿತ ಭಯೋತ್ಪಾದಕ ಕೃತ್ಯ. ವೈದ್ಯರ ನಿವಾಸದಿಂದ 2,900 ಕಿಲೋ ಗ್ರಾಂನಷ್ಟು ಸ್ಫೋಟಕ, ಶಸ್ತ್ರಾಸ್ತ್ರಗಳು ಪತ್ತೆಯಾಗಿತ್ತು.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 mins ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

6 mins ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

15 mins ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

58 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

1 hour ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

2 hours ago