ಉತ್ತರಾಖಂಡ: ಇಲ್ಲಿನ ರಿಷಿಕೇಶದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ದೇಶದಲ್ಲಿ ದೃಢವಿದೆ ಹೀಗಾಗಿ ಭಯೋತ್ಪಾದಕರನ್ನು ಮನೆಗಳಿಗೆ ನುಗ್ಗಿ ಕೊಲ್ಲಲಾಗುತ್ತಿದೆ ಎಂದು ಹೇಳಿದರು.
ದೇಶದ ತ್ರಿವರ್ಣ ಧ್ವಜ ಯುದ್ಧ ವಲಯದಲ್ಲೂ ಭದ್ರತೆಯ ಭರವಸೆಯಾಗುತ್ತಿದೆ. 7 ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಲಾಗಿದೆ. ತ್ರಿವಳಿ ತಲಾಖ್ ವಿರುದ್ಧ ಕಾನೂನು ರಚಿಸಲಾಗಿದೆ, ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸಿಕ್ಕಿದೆ. ಜತೆಗೆ ಸಾಮಾನ್ಯ ವರ್ಗಕ್ಕೆ ಸೇರಿದ ಬಡವರಿಗೂ ಶೇ.100ರಷ್ಟು ಮೀಸಲಾತಿ ಸಿಕ್ಕಿದೆ ಎಂದು ನರೇಂದ್ರ ಮೋದಿ ತಮ್ಮ ಸರ್ಕಾರ ಮಾಡಿದ ಕೆಲಸಗಳನ್ನು ಮೆಲುಕು ಹಾಕಿದರು.
ಕಳೆದ 10 ವರ್ಷಗಳಲ್ಲಿ ದೇಶವನ್ನು ಮೊದಲಿಗಿಂತಲೂ ಹಲವು ಪಟ್ಟು ಬಲಿಷ್ಠ ಮಾಡಿದ ಸರ್ಕಾರ ಇಂದು ದೇಶದಲ್ಲಿದೆ. ದೇಶದಲ್ಲಿ ದುರ್ಬಲ ಸರ್ಕಾರ ಇದ್ದಾಗೆಲ್ಲಾ ಶತ್ರುಗಳು ಲಾಭ ಮಾಡಿಕೊಂಡಿದ್ದಾರೆ ಮತ್ತು ಭಯೋತ್ಪಾದನೆಯನ್ನು ಹಬ್ಬಿಸಿದ್ದಾರೆ. ಈಗ ಮೋದಿ ಸರ್ಕಾರ ಬಲಿಷ್ಠವಾಗಿದೆ, ಆದ್ದರಿಂದ ಅವರ ಮನೆಗಳಿಗೆ ನುಗ್ಗಿ ಅವರನ್ನು ಕೊಲ್ಲಲಾಗುತ್ತಿದೆ ಎಂದು ಮೋದಿ ಹೇಳಿಕೆ ನೀಡಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…