ದೇಶ- ವಿದೇಶ

ಪಠ್ಯಪಸ್ತಕ ತಿದ್ದುಪಡಿ ಕೇಸರಿಕರಣ ಎನ್ನಲಾಗದು: ಎನ್‌ಸಿಇಆರ್‌ಟಿ

ನವದೆಹಲಿ: ಶಾಲೆಗಳಲ್ಲಿ ಗಲಭೆ, ಧ್ವಂಸಗಳ ಕುರಿತು ಬೋಧಿಸುವ ಅಗತ್ಯವಿಲ್ಲ. ಆದರೆ ಪಠ್ಯಪುಸ್ತಕ ತಿದ್ದುಪಡಿ ಜಾಗತಿಕ ಬದಲಾವಣೆ, ಪರಿಷ್ಕರಣೆಯನ್ನು ಕೇಸರೀಕರಣ ಎಂದು ಕರೆಯಲಾಗದು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ(ಎನ್‌ಸಿಈಆರ್‌ಟಿ) ನಿರ್ದೇಶಕ ದಿನೇಶ್‌ ಪ್ರಸಾದ್‌ ಸಕ್ಲಾನಿ ಹೇಳಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಶಾಲಾ ಪಠ್ಯಕ್ರಮದಲ್ಲಿ ಕೇಸರಿಕರಣದ ಆರೋಪಗಳನ್ನು ತಳ್ಳಿಹಾಕಿ, ಗುಜರಾತ್‌ ಗಲಭೆಗಳು ಹಾಗೂ ಬಾಬ್ರಿ ಮಸೀದಿ ಧ್ವಂಸ ವಿಷಯಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ ಎಂದರು.

ಹನ್ನೆರಡನೇ ತರಗತಿಯ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕದಲ್ಲಿ ಬಾಬ್ರಿ ಮಸೀದಿಯನ್ನು ಮೂರು ಗೋಪುರದ ಕಟ್ಟಡವೆಂದು ವರ್ಣಿಸಲಾಗಿದೆ. ಅಯೋಧ್ಯೆಯ ಪಾಠವಿದೆ. ಎಲ್.ಕೆ ಅಡ್ವಾನಿಯವರ ನೇತೃತ್ವದಲ್ಲಿ ನಡೆದ ಬಿಜೆಪಿ ರಥಯಾತ್ರೆಯನ್ನು ಉಲ್ಲೇಖಿಸಲಾಗಿದೆ. ಕರ ಸೇವಕರಿಂದ ಬಾಬ್ರಿ ಮಸೀದಿ ಕೆಡವಲಾಗಿದ್ದು, ಆ ಸಂಬಂಧಿತ ಘಟನೆಗಳ ವಿವರ ಕೊಡಲಾಗಿದೆ ಎಂದು ಹೇಳಿದರು.

ಬಿಜೆಪಿಯ ಆಡಳಿತದ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹಾಗೂ ಬಿಜೆಪಯ ವಿಷಾದಗಳ ವಿಷಯಗಳು ಸೇರಿವೆ. ಮೊಘಲರ ಸಾಧನೆಗಳಿಗೆ ಕತ್ತರಿ ಹಾಕಲಾಗಿದ್ದು, ರಾಮಮಂದಿರ ನಿರ್ಮಾಣ ಹಾಗೂ ಹೊಸ ಸಂಸತ್ ಭವನ ನಿರ್ಮಾಣ ವಿಷಯಗಳು ಸೇರಿಕೊಂಡಿವೆ.

ಯಾವುದಾದರೂ ಅಪ್ರಸ್ತುತ ವಿಷಯವಿದ್ದರೆ ಅದನ್ನು ಅಪ್‌ಡೇಟ್‌ ಮಾಡಬೇಕಾಗುತ್ತದೆ. ಬದಲಾವಣೆ ಮಾಡಬಾರದು ಎನ್ನಲಾಗುವುದಿಲ್ಲ. ನಾವು ಮಕ್ಕಳಿಗೆ ಇತಿಹಾಸ ಹೇಳಿಕೊಡುವುದು ನೈಜ ಜ್ಞಾನವನ್ನು ತುಂಬಲೇ ಹೊರತು ಘರ್ಷಣೆಗೆ ನೂಕುವುದಕ್ಕಲ್ಲ ಎಂದರು.

ರಾಮಮಂದಿರ, ಹೊಸ ಸಂಸತ್‌ ಭವನದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬಾರದೇಕೆ? ಪ್ರಾಚೀನ ಘಟನೆಗಳ ಜೊತೆಗೆ ಇತ್ತೀಚಿನ ವಿದ್ಯಮಾನವನ್ನು ಮಕ್ಕಳಿಗೆ ತಿಳಿಸುವುದು ನಮ್ಮ ಕರ್ತವ್ಯ ಎಂದು ದಿನೇಶ್‌ ಪ್ರಸಾದ್‌ ಸಕ್ಲಾನಿ ಸ್ಪಷ್ಟಪಡಿಸಿದ್ದಾರೆ.

ಹೆಚ್‌ಎನ್‌ಬಿ ಗರ್‌ವಾಲ್‌ ವಿವಿಯ ಪುರಾತತ್ವ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ದಿನೇಶ್‌ ಪ್ರಸಾದ್‌ ಅವರನ್ನು 2022 ರಲ್ಲಿ ಎನ್‌ಸಿಇಆರ್‌ಟಿ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಇವರು ಅಧಿಕಾರ ಸ್ವೀಕರಿಸಿದ ನಂತರ ಪಠ್ಯಗಳಲ್ಲಿ ಹಲವು ಬದಲಾವಣೆ ಮಾಡಲಾಗಿದೆ ಎಂದು ಆರೋಪ ಇವರ ಮೇಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago