ದೇಶ- ವಿದೇಶ

ಸಿಂಗ್‌ ಅವರ ಆ ಒಂದು ನಿರ್ಧಾರದಿಂದ ದೇಶ ಆರ್ಥಿಕ ಬಿಕ್ಕಟ್ಟಿನಿಂದ ಪಾರಾಯಿತು; ಮನಮೋಹನ್‌ ಸಿಂಗ್‌ರ ಕೆಲಸಗಳನ್ನು ನೆನದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಅವರು ಮಾತನಾಡಿದರು.

ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಢ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು. ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ ಮಧ್ಯಮ ಮತ್ತು ಬಡ ಜನರ ದೃಷ್ಟಿಯಿಂದ ಈ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು ಮನಮೋಹನ್‌ ಸಿಂಗ್‌ ಅವರು ಎಂದರು.

ಎಲ್ಲಾ ಹುದ್ದೆಗೂ ನ್ಯಾಯ ಒದಗಿಸಿದ ಸಿಂಗ್‌
ನಾನು ಹಲವು ಬಾರಿ ಇವರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು. ತಾವು ಅಲಂಕರಿಸಿದ ಎಲ್ಲಾ ಹುದ್ದೆಗಳಿಗೂ ನ್ಯಾಯ ಒದಗಿಸಿದರು. RBI ಗವರ್ನರ್ ಆಗಿ, ಆರ್ಥಿಕ ಸಚಿವರಾಗಿ, ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಎಲ್ಲಾ ಹುದ್ದೆಗಳಿಗೂ ಪ್ರಾಮಾಣಿಕ ನ್ಯಾಯ ಒದಗಿಸಿದರು ಎಂದು ಹೇಳಿದರು.

ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಹುದ್ದೆಗೆ ಮನಮೋಹನ್ ಸಿಂಗ್ ಅವರನ್ನು ಆರಿಸಿದರು. ಹತ್ತು ವರ್ಷಗಳ ಕಾಲ ದೇಶವನ್ನು ಅತ್ಯಂತ ಸದೃಡವಾಗಿ ಮುನ್ನಡೆಸಿದರು. ಭಾರತ ಆರ್ಥಿಕ ಸಂಕಷ್ಟದಲ್ಲಿದ್ದಾಗ ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕವಾಗಿ ಮೇಲೆತ್ತಿದರು. ಮನಮೋಹನ್ ಸಿಂಗ್ ಅವರಿಗಿಂತ ಮೊದಲು ದೇಶದ ಆರ್ಥಿಕತೆಯನ್ನು ವಿಶ್ವ ಆರ್ಥಿಕತೆ ಜೊತೆಗೆ ಮುಕ್ತ ಮಾಡಿರಲಿಲ್ಲ. ಇವರು ಮುಕ್ತಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದರು ಎಂದು ಸಿಂಗ್‌ ಅವರ ಕೆಲಸಗಳನ್ನು ಸ್ಮರಿಸಿದರು.

ಸಂವಿಧಾನದ ಮೂಲಭೂತ ಆಶಯಗಳ ಜಾರಿ
ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಿ ದೇಶದ ಬಡವರು, ಮಧ್ಯಮವರ್ಗದವರನ್ನು ಆರ್ಥಿಕವಾಗಿ ಮೇಲೆತ್ತುವುದರಲ್ಲಿ ಯಶಸ್ವಿಯಾದರು ಎಂದರು.

ಸಿಂಗ್ ಅಗಲಿಕೆ ಇಡೀ ವಿಶ್ವ ಆರ್ಥಿಕತೆಗೆ ಆಗಿರುವ ನಷ್ಟ

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಾವು ಆರಂಭಿಸಿದಾಗ ನಾವು ಮನಮೋಹನ್ ಸಿಂಗ್ ಅವರನ್ನು ಕರೆಸಿದ್ದೆವು. ಕರ್ನಾಟಕದ ಆರ್ಥಿಕತೆ ಬಗ್ಗೆ ಒಂದು ಕಾರ್ಯಕ್ರಮಕ್ಕೆ ನಾವು ಕರೆಸಿದ್ದೆವು. ಆಗ, ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಅತ್ಯಂದ ಸದೃಡವಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದರು. ಅವರ ಜ್ಞಾನ ಭಾರತದ ಅನೇಕ ಸಮಸ್ಯೆಗಳಿಗೆ ಪರಹಾರ ಕಂಡುಕೊಳ್ಳಲು ಸಾಧ್ಯವಾಯಿತು. ದೇಶದ ಆರ್ಥಿಕ ಸಮಸ್ಯೆಗಳನ್ನು ನಿಖರವಾಗಿ ಗ್ರಹಿಸಿ, ಪರಿಹರಿಸುತ್ತಿದ್ದ ಅವರು ನಿಗರ್ವಿ ಆಗಿದ್ದರು. ಅತ್ಯಂತ ವಿನಯಶೀಲರಾಗಿದ್ದರು ಎಂದು ಹೇಳಿದರು.

ನಾನು ಬದುಕಿರುವಾಗ ನನ್ನ ಕೆಲಸಗಳಿಗೆ ಹೆಚ್ಚು ಮಾನ್ಯ ಸಿಗದಿದ್ದರೂ ಮುಂದೆ ನಮ್ಮ ಕೆಲಸಗಳಿಗೆ ಹೆಚ್ಚು ಮಹತ್ವ ಸಿಗಲಿದೆ ಎಂದು ಮನಮೋಹನ್ ಸಿಂಗ್ ಅವರು ಅವತ್ತೇ ಹೇಳಿದ್ದರು‌ ಎಂದು ಸಿಎಂ ಸಿದ್ದರಾಮಯ್ಯ ಸಿಂಗ್‌ ಅವರ ಬೇಟಿಯ ನೆನಪುಗಳನ್ನು ಮೆಲುಕು ಹಾಕಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

2 mins ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

56 mins ago

ಅಮೇರಿಕಾ-ಇರಾನ್‌ ಸಂಧಾನ: ಪಾಕ್‌ನಲ್ಲೇ 2ನೇ ಸುತ್ತಿನ ಮಾತುಕತೆ

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

1 hour ago

2 ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು…

1 hour ago

ಹನೂರು ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರ ಶ್ರೀರೂಪ ಭೇಟಿ: ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ,…

1 hour ago

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…

2 hours ago