ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಮೇ.7ರಂದು ಆಪರೇಷನ್ ಸಿಂಧೂರ ಹೆಸರಿನಡಿಯಲ್ಲಿ ಭಾರತ ಮಾಡಿದ್ದ ದಾಳಿಗೆ ಭಾರತಕ್ಕೆ ಬೇಕಾಗಿದ್ದ 5 ಉಗ್ರರು ಮೃತಪಟ್ಟಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್.22ರಂದು ಭಯೋತ್ಪಾದಕರು ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಸಾವನ್ನಪ್ಪಿದ್ದರು. ಇದಕ್ಕೆ ಪ್ರತೀದಾಳಿಯಾಗಿ ಮೇ.7ರಂದು ಪಾಕ್‌ನ 9 ಸ್ಥಳಗಳಲ್ಲಿ ಉಗ್ರರ ಅಡಗು ತಾಣಗಳ ಮೇಲೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ ಭಾರತಕ್ಕೆ ಬೇಕಿದ್ದ ಐವರು ಉಗ್ರರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:- ಸೂಕ್ಷ್ಮ ಪ್ರದೇಶದಲ್ಲಿ ಸಿಬ್ಬಂದಿ ನಿಯೋಜನೆ ; ಗೃಹ ಸಚಿವ ಪರಮೇಶ್ವರ್
ಮುದಸ್ಸರ್ ಖಾದಿಯಾನ್ ಅಲಿಯಾಸ್ ಮುದಸ್ಸರ್ ಅಬು, ಜೈಶ್ ಎ ಮೊಹಮ್ಮದ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಹಫೀಜ್ ಮುಹಮ್ಮದ್ ಜಮೀಲ್, ಜೈಶ್ ಎ ಮೊಹಮ್ಮದ್‌ನಲ್ಲಿ ಸಕ್ರಿಯನಾಗಿದ್ದ ಮತ್ತೊಬ್ಬ ಉಗ್ರ ಮೊಹಮ್ಮದ್ ಯೂಸುಫ್ ಅಜರ್, ಉಗ್ರ ಸಂಘಟನೆಯಾದ ಲಷ್ಕರ್ ಎ ತೈಬಾದ ಉಗ್ರ ಅಬು ಆಕಾಶಾ, ಜೈಶ್ ಎ ಮೊಹಮ್ಮದ್‌ನಲ್ಲಿ ಸಕ್ರಿಯನಾಗಿದ್ದ ಮೊಹಮ್ಮದ್ ಹಸನ್ ಎಂಬ ಉಗ್ರರು ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ.





