ಹೊಸದಿಲ್ಲಿ : ಜಿಎಸ್‌ಟಿ ಬಗ್ಗೆ ನಮ್ಮ ಸರ್ಕಾರ ಕೈಗೊಂಡಿರುವ ನಿರ್ಣಯ ಭಾರತಕ್ಕೆ ಸ್ವಾತಂತ್ರ್ಯ ಬಂದ ಮೇಲೆ ನಡೆದ ಅತಿದೊಡ್ಡ ಕ್ರಾಂತಿಕಾರ ತೆರಿಗೆ ಸುಧಾರಣೆ ಆಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಗುರುವಾರ ದಿಲ್ಲಿಯಲ್ಲಿ ಮಾತನಾಡಿದ ಅವರು, ಜಿಎಸ್ಟಿ ಕಡಿತದಿಂದ ಉಳಿತಾಯವಾಗುವ ಪ್ರತಿ ರೂಪಾಯಿಯನ್ನು ಗ್ರಾಹಕರಿಗೆ ವರ್ಗಾಯಿಸಬೇಕು. ಇಲ್ಲದೇ ಹೋದರೆ ಜಿಎಸ್‌ಟಿ ಸುಧಾರಣೆಗೆ ಅರ್ಥವೆ ಇರುವುದಿಲ್ಲ ಎಂದು ಕೈಗಾರಿಕೆಗಳ ಕಿವಿ ಹಿಂಡಿದ್ದಾರೆ.
ಭಾರತೀಯರ ಶ್ರಮ ಮತ್ತು ಶ್ರಮದಿಂದ ತಯಾರಿಸಿದ ಉತ್ಪನ್ನಗಳು, ಭಾರತದ ಮಣ್ಣಿನಲ್ಲಿ ಪೋಷಿಸಲ್ಪಟ್ಟ ಉತ್ಪನ್ನಗಳನ್ನು ಬೆಂಬಲಿಸುವ ಅಗತ್ಯವನ್ನು ಒತ್ತಿ ಹೇಳಿದ ಅವರು, ಅಂತಹ ಉತ್ಪನ್ನಗಳು ದೇಶದ ಮೂಲೆ ಮೂಲೆಗಳನ್ನು ತಲುಪಿದಾಗ, ಅವು ಆರ್ಥಿಕ ಮೌಲ್ಯವನ್ನು ಮಾತ್ರವಲ್ಲದೆ ರಾಷ್ಟ್ರೀಯ ಹೆಮ್ಮೆ ಮತ್ತು ಸ್ವಾವಲಂಬನೆಯನ್ನು ಸಹ ಒಳಗೊಂಡಿರುತ್ತವೆ ಎಂದು ಹೇಳಿದರು.
ಸೆಪ್ಟೆಂಬರ್ 22 ರಿಂದ ಹೆಚ್ಚಿನ ವಸ್ತುಗಳಿಗೆ ಈ ನಿರ್ಧಾರಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ.
5% ಮತ್ತು 18% ಎಂಬ ಎರಡು ದರಗಳ ಹೊರತಾಗಿ, ಹೊಸ GST ವ್ಯವಸ್ಥೆಯು ತಂಬಾಕಿನಂತಹ ಸರಕುಗಳು ಮತ್ತು ದೊಡ್ಡ ಕಾರುಗಳು, ವಿಹಾರ ನೌಕೆಗಳು ಮತ್ತು ಹೆಲಿಕಾಪ್ಟರ್‌ಗಳಂತಹ ಐಷಾರಾಮಿ ವಸ್ತುಗಳ ಮೇಲೆ 40% “ವಿಶೇಷ ದರ” ವನ್ನು ಸಹ ಒಳಗೊಂಡಿರುತ್ತದೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…