ನವದೆಹಲಿ: ಅಮೇರಿಕಾ ಮಧ್ಯಸ್ಥಿಕೆಯಿಂದ ಭಾರತ-ಪಾಕ್ ಮಧ್ಯೆ ಕದನ ವಿರಾಮ ಜಾರಿಯಾಗಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.
ಈ ಮೂಲಕ ಅಮೇರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿಕೊಂಡಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ವಿದೇಶಾಂಗ ಸಚಿವ ಜೈಶಂಕರ್ ತಿರುಗೇಟು ಕೊಟ್ಟಿದ್ದಾರೆ.
ಇದನ್ನೂ ಓದಿ:- ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ
ಈ ಕುರಿತು ಮಾತನಾಡಿದ ಜೈಶಂಕರ್ ಅವರು, ಎರಡು ದೇಶಗಳ ಡಿಜಿಎಂಒಗಳಿಂದ ಕದನ ವಿರಾಮ ಜಾರಿಯಾಗಿದೆ. ಪಾಕಿಸ್ತಾನದ ಜೊತೆ ಯಾವುದೇ ಮಾತುಕತೆ ಇಲ್ಲ. ಜಮ್ಮು-ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮೂರನೇಯವರು ಬೇಡ. ಡಿಜಿಎಂಒಗಳಿಂದ ಕದನ ವಿರಾಮ ಘೋಷಣೆಯಾಗಿದೆ ಎಂದು ಮತ್ತೊಮ್ಮೆ ಹೇಳಿದರು.





