Mysore
35
clear sky

Social Media

ಶುಕ್ರವಾರ, 27 ಮಾರ್ಚ್ 2026
Light
Dark

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಗಣನೀಯವಾಗಿ ಕಡಿತಗೊಳಿಸಲಾಗಿದೆ.

ಪೆಟ್ರೋಲ್‌ನ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 13ರಿಂದ 3ಕ್ಕೆ ಇಳಿಸಲಾಗಿದೆ. ಡೀಸೆಲ್‌ನ ಮೇಲಿನ ಸುಂಕವನ್ನು ಪ್ರತಿ ಲೀಟರ್‌ಗೆ 10ರಿಂದ ಶೂನ್ಯಕ್ಕೆ (ಸಂಪೂರ್ಣ ರದ್ದು) ಇಳಿಸಿ ಪ್ರಕಟಣೆ ಹೊರಡಿಸಿದೆ. ಹೀಗಾಗಿ, ಬೆಲೆ ಏರಿಕೆ ಹೊರೆಯಿಂದ ಜನರಿಗೆ ನಿರಾಳ ನೀಡುವ ಸಾಧ್ಯತೆ ಇದೆ.

ಹೊರ್ಮುಜ್‌ ಜಲಸಂಧಿ ನಿರ್ಬಂಧದಿಂದ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಖಾಸಗಿ ಕಂಪನಿ ನಯಾರಾ ಎನರ್ಜಿ ಇತ್ತೀಚೆಗೆ ಪೆಟ್ರೋಲ್ ಬೆಲೆಯನ್ನು 5ರೂ. ಮತ್ತು ಡೀಸೆಲ್ ಬೆಲೆಯನ್ನು 3ರೂ. ಹೆಚ್ಚಿಸಿತ್ತು.

 

Tags:
error: Content is protected !!