ನವದೆಹಲಿ: ಮಾಜಿ ಪಿಎಂ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಮಾರಕವನ್ನು ನಿರ್ಮಿಸುವಂತೆ ಎಐಸಿಸಿ ಅಧ್ಯಕ್ಷ ಪತ್ರದ ಮೂಲಕ ಕೋರಿದ್ದರು. ಇದೀಗ ಆ ಪತ್ರಕ್ಕೆ ಸಮ್ಮತಿಸಿ ಸಿಂಗ್ ಅವರ ಸ್ಮಾರಕ್ಕೆ ಭೂಮಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇಂದು(ಡಿಸೆಂಬರ್.28) ಮನಮೊಹನ್ ಸಿಂಗ್ ಅವರ ಅಂತ್ಯಕ್ರಿಯೆ ಪೂರ್ಣಗೊಂಡ ನಂತರ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಿದ್ದು, ಸಿಂಗ್ ಅವರ ಸ್ಮಾರಕ್ಕೆ ಭೂಮಿಯನ್ನು ನೀಡಲು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಚಿಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದಾರೆ.
ಇನ್ನು ಕೇಂದ್ರ ವ್ಯವಹಾರಗಳ ಸಚಿವಾಲಯ ಈ ಬಗ್ಗೆ ಹೇಳಿಕೆ ನೀಡಿ, ಅಂತ್ಯಕ್ರಿಯೆ ಹಾಗೂ ವಿಧಿವಿಧಾನಗಳು ಮುಂದುವರಿಸಬಹುದು. ಏಕೆಂದರೆ ಟ್ರಸ್ಟ್ ರಚನೆ ಮತ್ತು ಜಾಗ ಹಂಚಿಕೆಯಾಗಬೇಕಿದೆ ಎಂದು ಸ್ಪಷ್ಟಪಡಿಸಿದೆ.
ಮನಮೋಹನ್ ಸಿಂಗ್ ಅವರು ಗುರುವಾರ ತಡರಾತ್ರಿ ನಿಧನರಾದ ಹಿನ್ನೆಲೆಯಲ್ಲಿ ಅವರ ಅಂತ್ಯಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರಕ್ಕೆ ಸ್ಮಾರಕ ನಿರ್ಮಾಣ ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಕೇಂದ್ರ ಸರ್ಕಾರ ಸಕರಾತ್ಮವಾಗಿ ಸ್ಪಂದಿಸಿ ಸ್ಮಾರಕ ನಿರ್ಮಾಣಕ್ಕೆ ಭೂಮಿಯನ್ನು ನೀಡಲಾಗುವುದು ಎಂದು ಒಪ್ಪಿಗೆ ಸೂಚಿಸಿದೆ.