ದೇಶ- ವಿದೇಶ

ಮೇಕ್‌ ಇನ್‌ ಇಂಡಿಯಾ ಯೋಜನೆಗೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ

ಹೊಸದಿಲ್ಲಿ: ಮೇಕ್‌ ಇನ್‌ ಇಂಡಿಯಾ ಯೋಜನೆಗೆ ಬಲ ನೀಡುವ ದಿಸೆಯಲ್ಲಿ ಕೇಂದ್ರ ಸರಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 11 ಸಾವಿರ ಕೋಟಿ ರೂ. ವೆಚ್ಚದಲ್ಲಿ 12 ಸುಖೋಯ್‌ – 30 ಎಂಕೆಐ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಖರೀದಿಸುವ ಪ್ರಸ್ತಾವಕ್ಕೆ ರಕ್ಷಣಾ ಸಚಿವಾಲಯ ಶುಕ್ರವಾರ ಅನುಮೋದನೆ ನೀಡಿದೆ. ಜತೆಗೆ ಧ್ರುವಾಸ್ತ್ರ ಕ್ಷಿಪಣಿ ಖರೀದಿ ಹಾಗೂ ಡಾರ್ನಿಯರ್‌ ವಿಮಾನದ ಉನ್ನತೀಕರಣಕ್ಕೂ ಸಮ್ಮತಿ ನೀಡಲಾಗಿದೆ.

ಈ 12 ಸುಖೋಯ್‌ ಯುದ್ಧ ವಿಮಾನಗಳನ್ನು ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌) ಉತ್ಪಾದಿಸಲಿದೆ. ಅದರಲ್ಲೂ ಶೇ. 60ರಷ್ಟು ಉಪಕರಣಗಳು ದೇಶೀಯವಾಗಿರಲಿವೆ ಎಂದು ರಕ್ಷಣಾ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.
lokesh

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

1 hour ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

1 hour ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

2 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

2 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

3 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

3 hours ago