ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.
ಶೌರ್ಯ ಪ್ರಶಸ್ತಿ ಪಡೆದ ಸಶಸ್ತ್ರ ಪಡೆಗಳ ಎಲ್ಲಾ ಸಿಬ್ಬಂದಿ, ಪ್ರಶಸ್ತಿ ಪಡೆದವರು ಮೃತಪಟ್ಟಿದ್ದರೆ ಅವರ ಹೆಂಡತಿ ಅಥವಾ ಗಂಡ ಹಾಗೂ ಅವರು ಮರುಮದುವೆಯಾಗುವವರೆಗೂ ಪ್ರಯೋಜನ ಪಡೆಯಬಹುದು. ಒಂದು ವೇಳೆ ಮೃತರಾದ ಬಳಿಕ ಪ್ರಶಸ್ತಿ ಘೋಷಣೆಯಾಗಿದ್ದರೆ ಅಥವಾ ಅವರು ಅವಿವಾಹಿತರಾಗಿದ್ದಲ್ಲಿ ಪೋಷಕರು ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ.
ಈ ಸೌಲಭ್ಯದ ಅಡಿಯಲ್ಲಿ ಫಲಾನುಭವಿಗಳು ತಮ್ಮ ಓರ್ವ ಸಹಚರನೊಂದಿಗೆ ಭಾರತೀಯ ರೈಲ್ವೆಯಲ್ಲಿ ಉಚಿತ ಪ್ರಯಾಣ ಮಾಡಬಹುದು. ಈ ಸೌಲಭ್ಯ ಪ್ರಥಮ ದರ್ಜೆ, ಎರಡನೇ ಎಸಿ, ಎಸಿ ಚೇರ್ ಕಾರ್ ವರ್ಗಗಳಿಗೆ ಅನ್ವಯಿಸುತ್ತದೆ.
ದೇಶಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ಸೈನಿಕರು ಮತ್ತು ಅವರ ಕುಟುಂಬಗಳಿಗೆ ಗೌರವಾನ್ವಿತ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸುವ ಗುರಿಯೊಂದಿಗೆ ಈ ಸೌಲಭ್ಯ ನೀಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…