ಬೆಂಗಳೂರು: ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ ಮಾಡಿದ್ದ ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ಘಟನೆ ಬಳಿಕ ಶಿಸ್ತು ಉಲ್ಲಂಘನೆ ವಿಚಾರಣೆ ಬಾಕಿಯಿರುವಂತೆ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಿಐಎಸ್‌ಎಫ್ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ ಎಂದು ಸಿಐಎಸ್‌ಎಫ್ ತಿಳಿಸಿದೆ.
2024ರ ಜೂನ್ 7 ರಂದು ಮಂಡಿ ಲೋಕಸಭಾ ಸಂಸದೆ ಕಂಗನಾ ರಣಾವತ್ ಚಂಡೀಗಢ್‌ನಿಂದ ದೆಹಲಿಗೆ ಹೊರಟಿದ್ದರು. ಈ ವೇಳೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಲ್ವಿಂದರ್ ಕೌರ್ ಅವರು ಸಂಸದೆ ಕಂಗನಾ ಅವರಿಗೆ ಕಪಾಳಮೋಕ್ಷ ಮಾಡಿದ್ದರು. ಬಳಿಕ ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆಯ ಸಂದರ್ಭದಲ್ಲಿ ರೈತರ ಬಗ್ಗೆ ಅಗೌರವ ತೋರುವ ರೀತಿಯಲ್ಲಿ ಮಾತನಾಡಿದ್ದರು ಆ ಕಾರಣ ಕಪಾಳಮೋಕ್ಷ ಮಾಡಿದ್ದೇನೆ ಎಂದು ಕುಲ್ವಿಂದರ್ ಹೇಳಿಕೆ ನೀಡಿದ್ದರು.
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…