ಮೈಸೂರು: ಇತ್ತೀಚೆಗಷ್ಟೆ ಬಿಡುಗಡೆಗೊಂಡ ತಮಿಳು ಸಿನಿಮಾ ತಂಗಳಾನ್ ಉತ್ತಮ ವಿಮರ್ಶೆಗೆ ಒಳಪಟ್ಟಿದೆ. ಅಷ್ಟೆ ಅಲ್ಲದೇ, ಬಾಕ್ಸ್ ಆಫೀಸ್‌ನಲ್ಲಿ ತನ್ನ ಗಳಿಕೆಯನ್ನು ಸಹ ಹೆಚ್ಚಿಸಿಕೊಂಡಿದೆ.
ತಮಿಳಿನ ಜನಪ್ರಿಯ ನಿರ್ದೇಶಕ ಹಾಗೂ ಅಂಬೇಡ್ಕರ್‌ವಾದಿ ಪಾ.ರಂಜಿತ್ ನಿರ್ದೇಶನದ ಸಿನಿಮಾವಾದ ತಂಗಳಾನ್‌ನಲ್ಲಿ ಚಿಯಾನ್ ವಿಕ್ರಂ, ಪಾರ್ವತಿ ಮೆನನ್ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಚಿನ್ನದ ಗಣಿಯ ಕತೆಯನ್ನು ಒಳಗೊಂಡಿರುವ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಹೊತ್ತಿನಲ್ಲಿ ಸಿನಿಮಾಕ್ಕೆ ಉತ್ತರ ಭಾರತದಿಂದಲೂ ಬೇಡಿಕೆ ಬಂದಿದ್ದು, ಸಿನಿಮಾ ಇದೀಗ ಹಿಂದಿಯಲ್ಲಿ ಬಿಡುಗಡೆ ಆಗುತ್ತಿದೆ.
ತಂಗಳಾನ್ ಆಗಸ್ಟ್ 15 ರಂದು ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಿತ್ತು. ಇದೀಗ ದಕ್ಷಿಣ ಭಾರತದಲ್ಲಿ ಉತ್ತಮ ಪ್ರದರ್ಶನ ಕಂಡ ತಂಗಲಾನ್ ಸಿನಿಮಾಕ್ಕೆ ಉತ್ತರ ಭಾರತದಲ್ಲೂ ಬಹು ಬೇಡಿಕೆ ಹುಟ್ಟಿಕೊಂಡಿದೆ. ಈ ಕಾರಣ ಸಿನಿಮಾವನ್ನು ಹಿಂದಿಗೆ ಡಬ್ ಮಾಡಿ ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಇದೇ ತಿಂಗಳೂ ಆಗಸ್ಟ್ 30 ರಂದು ತಂಗಲಾನ್ ಸಿನಿಮಾದ ಹಿಂದಿ ಆವೃತ್ತಿ ಉತ್ತರ ಭಾರತದ ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…