ಕೇರಳ: ರಾಜ್ಯದ ಲೋಕಸಭಾ ಚುನಾವಣೆಗೆ ಬಿಜೆಪಿಯ ಏಕೈಕ ಮುಸ್ಲಿಮ್ ಅಭ್ಯರ್ಥಿಯಾಗಿರುವ ಎಂ. ಅಬ್ದುಲ್ ಸಲಾಂ ಅವರು ಪಕ್ಷದ ಚುನಾವಣಾ ಕಾರ್ಯತಂತ್ರದಿಂದ ಹತಾಶಗೊಂಡಿದ್ದಾರೆ. ಚುನಾವಣಾ ಸಮಯದಲ್ಲಿ ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ’ಯ ಪ್ರದರ್ಶನ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಯಂತಹ ವಿಷಯಗಳ ಕುರಿತು ತನ್ನ ನಿಲುವನ್ನು ಸೂಕ್ತವಾಗಿ ಜನರಿಗೆ ತಿಳಿಸುವಲ್ಲಿ ಪಕ್ಷದ ಅಸಾಮರ್ಥ್ಯವು ಮುಸ್ಲಿಮರು ಬಿಜೆಪಿಯಿಂದ ದೂರವಿರುವಂತೆ ಮಾಡಿವೆ ಎಂದು ಅವರು ಹೇಳಿದ್ದಾರೆ.
ಚುನಾವಣಾ ಸಮಯದಲ್ಲಿ ‘ದಿ ಕೇರಳ ಸ್ಟೋರಿ’ಪ್ರದರ್ಶನವು ಮುಸ್ಲಿಮರು ಬಿಜೆಪಿಯಿಂದ ಇನ್ನಷ್ಟು ದೂರ ಸರಿಯುವಂತೆ ಮಾಡುತ್ತದೆ, ಭಾರತದಲ್ಲಿ 20 ಕೋಟಿ ಗೂ.ಅಧಿಕ ಮುಸ್ಲಿಮರಿದ್ದಾರೆ. ನಾವು ಅವರನ್ನು ಮುಖ್ಯವಾಹಿನಿಯಿಂದ ದೂರವಿರಿಸಬಾರದು. ಆಡಳಿತವನ್ನು ಹಂಚಿಕೊಳ್ಳಲು ಅವರು ಮುಖ್ಯವಾಹಿನಿಯಲ್ಲಿರುವುದು ಅಗತ್ಯವಾಗಿದೆ ಎಂದು ಮಲಪ್ಪುರಮ್ನಲ್ಲಿ, ತನ್ನ ಚುನಾವಣಾ ಪ್ರಚಾರದ ನೇಪಥ್ಯದಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ ಅಬ್ದುಲ್ ಸಲಾಂ ಹೇಳಿದರು.
ಪಾಲಕ್ಕಾಡ್ ನಲ್ಲಿ ನಡೆದಿದ್ದ ಪ್ರಧಾನಿ ಮೋದಿಯವರ ರೋಡ್ ಶೋದಲ್ಲಿ ಅವರೊಂದಿಗಿರಲು ತನಗೆ ಅನುಮತಿ ನಿರಾಕರಿಸಲ್ಪಟ್ಟ ಬಳಿಕ ಉಂಟಾಗಿರುವ ವಿವಾದದ ಕುರಿತು ಮಾತನಾಡಿದ ಅವರು, ಈ ಘಟನೆಯು ಪಕ್ಷಕ್ಕೆ ಬಹಳಷ್ಟು ಹಾನಿಯನ್ನುಂಟು ಮಾಡಿದೆ ಎಂದರು. ಬಿಜೆಪಿಯ ರಾಜ್ಯ ನಾಯಕತ್ವವು ಇಂತಹ ಘಟನೆಯನ್ನು ತಪ್ಪಿಸಬಹುದಿತ್ತು. ಆದಾಗ್ಯೂ, ಈಗಲೂ ನಾನು ನನ್ನ ಪಕ್ಷವನ್ನು ಸಮರ್ಥಿಸುತ್ತೇನೆ’ ಎಂದರು.
ಮುಸ್ಲಿಮ್ ಪ್ರಾಬಲ್ಯವಿರುವ ಮಲಪ್ಪುರಂ ಕ್ಷೇತ್ರದಲ್ಲಿ ಮತಗಳನ್ನು ಗಳಿಸಲು ಈಗಿನ ಪ್ರಚಾರ ಸಾಲುವುದಿಲ್ಲ. ನಾನು ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2-3 ಸುತ್ತುಗಳ ಪ್ರಚಾರವನ್ನು ಪೂರ್ಣಗೊಳಿಸಿದ್ದೇನೆ. ಆದರೆ ಇತರ ಪಕ್ಷಗಳಿಗೆ ಹೋಲಿಸಿದರೆ ನಮ್ಮ ಪ್ರಚಾರವು ದುರ್ಬಲವಾಗಿದೆ ಎಂದರು.
ಈದ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರ ಮನೆಗಳಿಗೆ ಏಕೆ ಭೇಟಿ ನೀಡಲಿಲ್ಲ ಎಂದು ವ್ಯಕ್ತಿಯೋರ್ವರು ನನ್ನನ್ನು ಪ್ರಶ್ನಿಸಿದ್ದರು. ಕ್ರಿಸ್ಮಸ್ ಸಂದರ್ಭದಲ್ಲಿ ಕ್ರಿಶ್ಚಿಯನ್ನರ ಮನೆಗಳಿಗೆ ನಾವು ಭೇಟಿ ನೀಡಿದ್ದೆವು. ಇದು ಏನನ್ನು ಸೂಚಿಸುತ್ತದೆ ಎಂದೂ ಜನರು ನನ್ನನ್ನು ಪ್ರಶ್ನಿಸಿದ್ದಾರೆ’ ಎಂದು ಹೇಳಿದ ಸಲಾಂ, ಬಿಜೆಪಿ ಏಕೆ ಒಬ್ಬನೇ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂಬ ಪ್ರಶ್ನೆಯೂ ತನಗೆ ಎದುರಾಗುತ್ತಿದೆ ಎಂದರು.
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…