ದೇಶ- ವಿದೇಶ

ನನಗೆ ಬಂದಿರುವ ನೊಟೀಸ್‌ ನಕಲಿ ಎಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ದೆಹಲಿ: ವಿಜಯೇಂದ್ರ ನಕಲಿ ನೊಟೀಸ್‌ ಮಾಡಿಸಿದ್ದಾನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ.

ಸ್ವಪಕ್ಷದವರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ ಬಂದಿರುವ ಶಾಸಕ ಯತ್ನಾಳ್‌ ಅವರು, ತಮಗೆ ಶಿಸ್ತು ಸಮಿತಿ ನೋಟಿಸ್‌ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅವರು, ವಿಜಯೇಂದ್ರನೇ ನಕಲಿ ನೊಟೀಸ್‌ ತಯಾರಿ ಮಾಡಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನನಗೆ ಈವರೆಗೂ ಅಧಿಕೃತವಾಗಿ ಪಕ್ಷದ ಕೇಂದ್ರ ಸಮಿತಿಯಿಂದ ನೊಟೀಸ್‌ ಬಂದಿಲ್ಲ. ವಾಟ್ಸ್‌ಆಪ್‌ನಲ್ಲಿ ನೊಟೀಸ್‌ ಬಂದಿದೆ. ಅಲ್ಲಿ ಬಂದಿರುವುದನ್ನು ಹೇಗೆ ನಂಬಲಿ? ನನಗೆ ಯಾಕೋ ವಿಜಯೇಂದ್ರನೇ ನಕಲಿ ನೊಟೀಸ್‌ ಮಾಡಿಸಿದ್ದಾನೆ ಎನಿಸುತ್ತಿದೆ. ನನಗೆ ಅಧಿಕೃತವಾಗಿ ನೊಟೀಸ್‌ ಬಂದ ಬಳಿಕ ಸರಿಯಾದ ಉತ್ತರ ನೀಡುತ್ತೇನೆ ಎಂದರು.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯತ್ನಾಳ್‌ ಅವರು, ನಾನು ಸ್ವಂತ ಸಾಮರ್ಥ್ಯದ ಮೇಲೆ ನಾಯಕನಾಗಿದ್ದೀನಿ. ಬಿಎಸ್‌ವೈ ಭಯದಿಂದ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ವಿಜಯೇಂದ್ರಗೆ ಏನೂ ಗೊತ್ತಿಲ್ಲ. ಅವನು ಇನ್ನೂ ಸಣ್ಣ ಹುಡುಗ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನೊಟೀಸ್‌ ಸಂಬಂಧ ಯಾವ ನಾಯಕರನ್ನು ನಾನು ಭೇಟಿ ಮಾಡಲ್ಲ. ನನಗೆ ಬಂದಿರುವ ನೊಟೀಸ್‌ ನಕಲಿ ಎನಿಸುತ್ತಿದೆ ಎಂದು ಆರೋಪಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

3 mins ago

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

12 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

13 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

13 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

13 hours ago