ಹೊಸದಿಲ್ಲಿ : ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿದೆ. ಈ ಮಸೂದೆಯೂ ಆನ್‌ಲೈನ್ ಗೇಮಿಂಗ್ ವೇದಿಕೆಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಿದೆ.
ಹೆಚ್ಚುತ್ತಿರುವ ಆರ್ಥಿಕ ವಂಚನೆ, ಹಣ ವರ್ಗಾವಣೆ ಮತ್ತು ಗೇಮಿಂಗ್ ವ್ಯಸನವನ್ನು ನಿಭಾಯಿಸುವ ಗುರಿಯನ್ನು ಹೊಂದಿರುವ ಈ ಕ್ರಮವು ದೇಶದ ಕ್ರೀಡಾ ಆರ್ಥಿಕತೆಯಲ್ಲಿ, ವಿಶೇಷವಾಗಿ ಕ್ರಿಕೆಟ್‌ನಲ್ಲಿ ದುಪ್ಪಟ ಬದಲಾವಣೆಗೆ ನಾಂದಿಹಾಡಲಿದೆ.
ಆನ್‌ಲೈನ್ ಬೆಟ್ಟಿಂಗ್ ಅನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವುದು, ಇ-ಸ್ಪೋರ್ಟ್ಸ್, ಶೈಕ್ಷಣಿಕ ಗೇಮಿಂಗ್, ಸಾಮಾಜಿಕ ಮತ್ತು ಕ್ಯಾಶುಯಲ್ ಗೇಮಿಂಗ್, ಮತ್ತು ನೈಜ ಹಣದ ಗೇಮಿಂಗ್ ಇವುಗಳಲ್ಲಿ, ಬಳಕೆದಾರರು ಹಣವನ್ನು ಠೇವಣಿ ಇರಿಸಿ ನಗದು ಬಹುಮಾನಗಳಿಗಾಗಿ ಆಡುವ ನೈಜ ಹಣದ ಗೇಮಿಂಗ್ ಅನ್ನು ಕ್ರಿಮಿನಲ್ ಅಪರಾಧವೆಂದು ಘೋಷಿಸಿರುವುದು ಸೇರಿದಂತೆ ಹಲವು ಕ್ರಮಗಳನ್ನು ಮಸೂದೆ ಒಳಗೊಂಡಿದೆ.
ಈ ಮಸೂದೆಯಡಿ ತಪ್ಪಿತಸ್ಥರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿವರೆಗೆ ದಂಡ ವಿಧಿಸಲು ಅವಕಾಶ ಇರುತ್ತದೆ.
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…