ದೇಶ- ವಿದೇಶ

ಸಂಸತ್‌ನಲ್ಲಿ ಶಿವನ ಚಿತ್ರ ಪ್ರದರ್ಶಿಸಿದ ರಾಹುಲ್‌ ಗಾಂಧಿ, ಆಕ್ಷೇಪಿಸಿದ ಸ್ಪೀಕರ್

ನವದೆಹಲಿ: ಲೋಕಸಭಾ ಸಂಸತ್‌ನಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಶಿವನ ಚಿತ್ರ ಪ್ರದರ್ಶಿಸಿದ್ದಕ್ಕೆ ಸ್ಪೀಕರ್‌ ಓಂ ಬಿರ್ಲಾ ಆಕ್ಷೇಪಿಸಿದ್ದಾರೆ.

ಸೋಮವಾರ(ಜು.1) ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ ರಾಹುಲ್‌ ಗಾಂಧಿ, ಶಿವನ ಚಿತ್ರ ಪ್ರದರ್ಶಿಸಿ, ಹಿಂದು ಧರ್ಮ ದ್ವೇಷ ಮತ್ತು ಭೀತಿ ಹರಡುಲು ಸಾಧ್ಯವಿಲ್ಲ, ಆದರೆ ಬಿಜೆಪಿಗರು ಅದನ್ನೇ ಮಾಡುತ್ತಿದ್ದಾರೆ ಎಂದು ಹೇಳಿದರು.

ಎಲ್ಲಾ ಧರ್ಮಗಳೂ ಧೈರ್ಯದ ಬಗ್ಗೆ ಹೇಳುತ್ತವೆ. ಇಸ್ಲಾಂ ಮತ್ತು ಸಿಖ್‌ ಧರ್ಮ ಕೂಡ ನಾವು ನಿರ್ಭೀತಿಯಿಂದಿರಬೇಕು ಎಂದು ಹೇಳಿವೆ. ಮಹಾನ್‌ ವ್ಯಕ್ತಿಗಳೆಲ್ಲಾ ಅಹಿಂದೆ ಬಗ್ಗೆ ಮಾತನಾಡಿದ್ದಾರೆ. ಆದರೆ ತಮ್ಮನ್ನು ತಾವು ಹಿಂದುಗಳೆಂದು ಕರೆದುಕೊಳ್ಳುವವರು ಹಿಂಸೆ , ದ್ವೇಷ ಮತ್ತು ಸುಳ್ಳಿನ ಬಗ್ಗೆ ಮಾತನಾಡುತ್ತಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಈ ವೇಳೆ ಭಾಷಣ ಮಧ್ಯ ಶಿವನ ಚಿತ್ರ ಪ್ರದರ್ಶಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್, ಭಿತ್ತಿಪತ್ರಗಳ ಪ್ರದರ್ಶನಕ್ಕೆ ನಿಯಮ ಅನುಮತಿಸುವುದಿಲ್ಲ ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

1 hour ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

2 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

2 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

2 hours ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

2 hours ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

2 hours ago