ಹೈದರಾಬಾದ್: ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಲಾಗಿದೆ.
ನಾಳೆ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಚಿಕ್ಕಡಪಲ್ಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಳೆ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದು, ಏನು ಕ್ರಮ ಆಗಲಿದೆ ಎಂಬ ಪ್ರಶ್ನೆ ಮೂಡಿದೆ.
ಡಿಸೆಂಬರ್.4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ-2 ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತ ಸಂಭವಿಸಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು. 8 ವರ್ಷದ ಮಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ನಟ ಅಲ್ಲು ಅರ್ಜುನ್‌ಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ನಾಳೆ ಅಲ್ಲು ಅರ್ಜುನ್ ಅವರು ಪೊಲೀಸ್ ಠಾಣೆಗೆ ವಿಚಾರಣೆಗೆಂದು ಹಾಜರಾಗಲಿದ್ದು, ನಾಳಿನ ವಿಚಾರಣೆ ಮಹತ್ವ ಪಡೆದುಕೊಂಡಿದೆ ಎನ್ನಲಾಗಿದೆ.
ಇನ್ನು ಥಿಯೇಟರ್‌ನಲ್ಲಿ ಮೃತಪಟ್ಟಿದ್ದ ಮಹಿಳೆಯ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ…
ಬೆಂಗಳೂರು: ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…
ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ…