ಅಹಮದಾಬಾದ್: ಗುಜರಾತ್ ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಅಹಮದಾಬಾದ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ಬಣ ಸಾರ್ವಜನಿಕರೊಂದಿಗೆ ಇದ್ದರೆ, ಇನ್ನೊಂದು ಬಣ ಸಾರ್ವಜನಿಕರಿಂದ ದೂರವಿರುತ್ತದೆ ಎಂದು ಅಸಮಾಧಾನ ಹೊರಹಾಕಿದರು.
ಇನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ನಾಯಕರು ನಿರ್ದೇಶನ ನೀಡುವಲ್ಲಿ ವಿಫಲರಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುವುದರಲ್ಲಿ ತಮಗೆ ಯಾವುದೇ ಸಮಸ್ಯೆ ಇಲ್ಲ. ಈ ಸಂಭಾಷಣೆಯಲ್ಲಿ ಸಂಘಟನೆ, ಗುಜರಾತ್ ರಾಜಕೀಯ ಮತ್ತು ಇಲ್ಲಿನ ಸರ್ಕಾರದ ಕಾರ್ಯವೈಖರಿಗೆ ಸಂಬಂಧಿಸಿದ ಹಲವು ವಿಷಯಗಳು ಬೆಳಕಿಗೆ ಬಂದವು ಎಂದರು.





