ದೇಶ- ವಿದೇಶ

ಮೋದಿ ಸಂಪುಟ ರಚನೆ: ಈ ಬಾರಿ ಮುಸ್ಲಿಮರಿಗಿಲ್ಲ ಯಾವುದೇ ಸ್ಥಾನಮಾನ!

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಿಂದ ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಯಾವುದೇ ಮುಸ್ಲಿಂ ಸಚಿವರಿಲ್ಲದ ಕೇಂದ್ರ ಸಚಿವ ಸಂಪುಟ ರಚನೆಯಾಗಿದೆ.

ಭಾನುವಾರ ರಾತ್ರಿ ಅಸ್ತಿತ್ವಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಹಲವು ರಾಜ್ಯಗಳು, ವರ್ಗಗಳು ಮತ್ತು ಜಾತಿಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ. ಆದರೆ ದೇಶದ ಯಾವುದೇ ಒಬ್ಬ ಮುಸ್ಲಿಂಗೆ ಒಂದೇ ಒಂದು ಸಚಿವ ಸ್ಥಾನ ನೀಡಿಲ್ಲ.

2022 ರಲ್ಲಿ ಬಿಜೆಪಿಯ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೂರು ವರ್ಷಗಳ ನಂತರ ರಾಜ್ಯಸಭೆಗೆ ಮರು ಆಯ್ಕೆಯಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರ ನಂತರದಲ್ಲಿ ಸರ್ಕಾರದಲ್ಲಿ ಯಾವೊಬ್ಬ ಮುಸ್ಲಿಂ ಸಚಿವರು ಇರಲಿಲ್ಲ.

ಇನ್ನು 2014 ರಲ್ಲಿ, ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗ, ಆಗಿನ ರಾಜ್ಯಸಭಾ ಸಂಸದ ನಜ್ಮಾ ಹೆಪ್ತುಲ್ಲಾ ಅವರನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರನ್ನಾಗಿ ಮಾಡಲಾಯಿತು.

2004 ಮತ್ತು 2009ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಗಳಲ್ಲಿ ಕ್ರಮವಾಗಿ ನಾಲ್ಕು ಮತ್ತು ಐದು ಮುಸ್ಲಿಂ ಸಚಿವರನ್ನು ಒಳಗೊಂಡಿದ್ದರು. ಮೊದಲೆಲ್ಲಾ ನಡೆದ ಸಾರ್ವತ್ರಿಕ ಚುನಾವಣೆಯ ಬಳಿಕ ಸಂಪುಟದಲ್ಲಿ ಮುಸ್ಲೀಂ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದುಂಟು. ಆದರೆ ಇದೇ ಮೊದಲ ಬಾರಿಗೆ ಕೇಂದ್ರದಲ್ಲಿ ಮುಸ್ಲಿಂಮರೇ ಇಲ್ಲದ ಸಂಪುಟ ರಚನೆಯಾಗಿರುವುದು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

7 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

26 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago