ದೇಶ- ವಿದೇಶ

ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ

ನವದೆಹಲಿ: ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್.‌22ರ ಮೊದಲು ಮತ್ತು ಪ್ರಸ್ತು ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.

ಬಿಹಾರದಲ್ಲಿ ಸಿಎಂ ನಿತೀಶ್‌ ಕುಮಾರ್‌ ನೇತೃತ್ವದ ಎನ್‌ಡಿಎ ಮತ್ತು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್‌ ಮಧ್ಯೆ ನೇರ ಸ್ಪರ್ಧೆಯಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ.

 ಇದನ್ನು ಓದಿ : ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಬಿ.ವೈ.ವಿಜಯೇಂದ್ರ ಭವಿಷ್ಯ

ಬಿಜೆಪಿ 80, ಜೆಡಿಯು 45, ಎಚ್‌ಎಎಂ(ಎಸ್)‌ 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್‌ 19, ಸಿಪಿಐ(ಎಂ) 2, ಸಿಪಿಐ 2 ಸ್ಥಾನ ಹೊಂದಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020ರ ವಿಧಾನಸಭಾ ಚುನಾವಣೆಗಳು ಮೂರು ಹಂತಗಳಲ್ಲಿ ನಡೆದಿದ್ದವು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್‌ ಕುಮಾರ್‌ ಅವರು ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022ರಲ್ಲಿ ನಿತೀಶ್‌ ಕುಮಾರ್‌ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್‌ ಜೊತೆ ಸೇರಿ ಸರ್ಕಾರ ರಚಿಸಿದ್ದರು. ನಿತೀಶ್‌ ಕುಮಾರ್‌ 2024ರಲ್ಲಿ ಮಹಾಘಟಬಂಧನ್‌ ಜೊತೆಗಿನ ಸಂಬಂಧವನ್ನು ಮುರಿದು ಎನ್‌ಡಿಎ ಜೊತೆ ಮತ್ತೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

1 hour ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

1 hour ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

1 hour ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

1 hour ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

2 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

2 hours ago